ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಗಾಯಗೊಂಡವರ ಸಂಖ್ಯೆ 50ಕ್ಕೆ ಏರಿಕೆ
ಬೆಂಗಳೂರು ಕಡೆಯಿಂದ ಮಂಡ್ಯ ಕಡೆಗೆ ಬರುತ್ತಿದ್ದ KSRTC ಬಸ್
ಮಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಡಿಸಿ
ಮಂಡ್ಯ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. KSRTC ಪಲ್ಟಿಯಾಗಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಗಾಯಗೊಂಡವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.
ಎಕ್ಸ್‌ಪ್ರೆಸ್ ಹೈವೇಯಿಂದ KSRTC ಬಸ್ ಸರ್ವೀಸ್ ರಸ್ತೆ ಕಡೆ ತಿರುಗಿದೆ. ಈ ವೇಳೆ ನಿಂತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತಕ್ಕೆ ಒಳಗಾದ KSRTC ಅಲ್ಲಿ 80ಕ್ಕೂ ಹೆಚ್ಚು ಮಂದಿ ಪ್ರಯಾಣ ಮಾಡುತ್ತಿದ್ದರು.
ಮಂಡ್ಯದ ಸಾಂಜೋ ಆಸ್ಪತ್ರೆ ಬಳಿ ಬೆಳಗ್ಗೆ 9.50ಕ್ಕೆ ಈ ದುರಂತ ಸಂಭವಿಸಿದೆ. ಬೆಂಗಳೂರು ಕಡೆಯಿಂದ ಮಂಡ್ಯ ಕಡೆಗೆ ಬರುತ್ತಿದ್ದ ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳೇ ಹೆಚ್ಚು ಪ್ರಯಾಣ ಮಾಡುತ್ತಿದ್ದರು. ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್.. ಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್ ಅನುಮತಿ
KSRTC ಬಸ್ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, 30ಕ್ಕೂ ಹೆಚ್ಚು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲೂ ಡಿಸಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, DHO ಡಾ. ಮೋಹನ್ ಅವರು ಸಾಥ್ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ