ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಬೊಲೆರೋ, KSRTC ಬಸ್ ನಡುವೆ ಅಪಘಾತ
ಎಕ್ಸ್‌ಪ್ರೆಸ್ ಹೈವೆಯಲ್ಲಿ ಬೊಲೆರೋಗೆ ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ, ಕಂಡಕ್ಟರ್ ಸಾವು
ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ನಲ್ಲಿ 9 ತಿಂಗಳಲ್ಲಿ 800ಕ್ಕೂ ಹೆಚ್ಚು ಆಕ್ಸಿಡೆಂಟ್ ಕೇಸ್ ದಾಖಲು
ರಾಮನಗರ: ಇತ್ತೀಚಿನ ದಿನಗಳಲ್ಲಿ ಅಪಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದೆ. ಅದರಲ್ಲೂ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿ ಸಾಕಷ್ಟು ಸಾವು-ನೋವುಗಳಿಗೆ ಕಾರಣವಾಗುತ್ತದೆ. ಇದೀಗ ಪ್ಲೈವುಡ್ ತುಂಬಿದ್ದ ಬೊಲೆರೋ ವಾಹನಕ್ಕೆ ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬಸ್ ಕಂಡಕ್ಟರ್ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಚಾಲಕ ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಈ ಭೀಕರ ಅಪಘಾತವು ರಾಮನಗರ ತಾಲೂಕಿನ ವಿಜಯಪುರ ಗ್ರಾಮದ ಬಳಿ ಸಂಭವಿಸಿದೆ. ಸದ್ಯ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಎಸ್ಆರ್ಟಿಸಿ ಬಸ್ ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಫ್ಲೈವುಡ್ ತುಂಬಿಕೊಂಡು ಬರುತ್ತಿದ್ದ ಬೊಲೆರೋ ವಾಹನಕ್ಕೆ ಓವರ್ ಟೇಕ್ ಮಾಡಲು ಹೋಗಿ ಈ ದುರ್ಘಟನೆ ಸಂಭವಿಸಿದೆ. ಸದ್ಯ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು, ಈಗಾಗಲೇ ನಿರ್ಮಾಣವಾಗಿರುವ ದಶಪಥ ರಸ್ತೆಯಲ್ಲಿ 9 ತಿಂಗಳಲ್ಲಿ 800 ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ ಎಂದು ವರದಿ ಮೂಲಕ ತಿಳಿದು ಬಂದಿದೆ. ಅದರಲ್ಲೂ 150ಕ್ಕೂ ಹೆಚ್ಚು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಹೀಗಾಗಿ ಬೆಂಗಳೂರು-ಮೈಸೂರು ದಶಪಥ ರಸ್ತೆಯನ್ನು ಮರು ಪರಿಶೀಲನೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ