/newsfirstlive-kannada/media/post_attachments/wp-content/uploads/2024/04/HDK-Shivmogga.jpg)
ಮೂಡಾ ಮತ್ತು ವಾಲ್ಮೀಕಿ ಹಗರಣ ವಿರುದ್ಧವಾಗಿ ಬಿಜೆಪಿ ಹಮ್ಮಿಕೊಂಡಿದ್ದ ಪಾದಯಾತ್ರೆ ಕುರಿತಂತೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.
ಜೆ.ಟಿ ದೇವೆಗೌಡರ ನೇತೃತ್ವದಲ್ಲಿ ಕೋರ್ ಕಮಿಟಿ ಸದಸ್ಯರು ನಿರ್ಧಾರ ತೆಗೆದುಕೊಂಡಿದ್ದಾರೆ. ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೆಚ್​ ಡಿ ಕುಮಾರಸ್ವಾಮಿಯವರು ಹೇಳಿದ್ದಾರೆ.
ಇದನ್ನೂ ಓದಿ: ‘ಅಮ್ಮ, ಅಪ್ಪ ಎಲ್ಲಿ..’ ತಂಗಿಯ ಶವದ ಮುಂದೆ ಅಕ್ಕ ರೋದನೆ.. ಭೂಕುಸಿತಕ್ಕೆ ಸ್ಮಶಾನವಾದ ಮದುವೆ ಸಂಭ್ರಮ..
ನಂತರ ಮಾತು ಮುಂದುವರಿಸಿದ ಅವರು, ಕೇರಳದಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕದಿಂದ ಹೋದ ಜನರು ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ದಾರೆ. ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲೂ ಹಲವೆಡೆ ರೆಡ್, ಎಲ್ಲೋ ಅಲರ್ಟ್ ಘೋಷಿಸಿದೆ. ಹಲವು ಜಿಲ್ಲೆಗಳಲ್ಲಿ ಜಲಾವೃತಗೊಂಡು ಸಂಕಷ್ಟ ಎದುರಿಸುತ್ತಿದ್ದಾರೆ. ಮಂಡ್ಯ ಭಾಗದಲ್ಲಿ ಭತ್ತದ ಸಸಿ ನೆಡುವ ಕೆಲಸ ಶುರುವಾಲಿದೆ. ಈ ಹಿನ್ನಲೆ ನಮ್ಮ ನಾಯಕರು ಈ ನಿರ್ಧಾರಕ್ಕೆ ಬಂದಿದ್ದಾರೆ. ಪಾದಯಾತ್ರೆ ಮಾಡಬೇಕು ಎಂದು ಬಿಜೆಪಿ ನಾಯಕರು ಈ ಮುಂಚೆ ನಿರ್ಧಾರ ಮಾಡಿದ್ದರು. ನಮಗೆ ಮಾಹಿತಿಗಾಗಿ ಹೇಳಿದ್ದಾರೆ ಅಷ್ಟೇ. ಬಿಜೆಪಿ ನಿಲುವಿನಲ್ಲಿ ತಿರ್ಮಾನ ತೆಗೆದುಕೊಂಡು ಹೋರಾಟ ಮಾಡುತ್ತಿದ್ದಾರೆ. ಪಾದಯಾತ್ರೆಗೆ ಸೂಕ್ತವಾದ ಸಂದರ್ಭವಲ್ಲ ಅಂತಾ ನಾವು ಹಿಂದೆ ಸರಿದಿದ್ದೇವೆ ಎಂದು ಹೆಚ್​ಡಿಕೆ ಹೇಳಿದ್ದಾರೆ.
ಜನರ ಟೀಕೆ ವ್ಯಕ್ತವಾಗುವ ಸಾಧ್ಯತೆ ಇದೆ. ಈ ಹಿನ್ನಲೆ ನಾವು ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇವೆ. ಅಲ್ಲಿನ ಜನರ ಸಮಸ್ಯೆ ಏನು ಅದು ಮುಖ್ಯ. ಪಾದಯಾತ್ರೆಯಿಂದ ಲಾಭ ಏನು ? ಕಾನೂನು ಹೋರಾಟವು ಮುಖ್ಯ. ರಾಜಕೀಯವೇ ನಮಗೆ ಪ್ರಾಮುಖ್ಯವಲ್ಲ. ನಾವು ನೈತಿಕ ಬೆಂಬಲವೂ ಕೊಡಲ್ಲ, ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದಾಗ ಯಾಕೆ ಬೆಂಬಲ ಕೊಡಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ: Special Interview: ನಿಮ್ಮ ಮಗುವಿಗೆ ಡೆಂಗ್ಯೂ ಬಂದಿದೆಯಾ? ಎಷ್ಟು ದಿನದೊಳಗೆ ವೈದ್ಯರನ್ನು ಕಾಣಬೇಕು?
ಬೆಂಗಳೂರು ಮೈಸೂರುವರೆಗೂ ನಮ್ಮ ಶಕ್ತಿ ಇದೆ. ನಮ್ಮನ್ನು ಪರಿಗಣಿಸಿದ್ದರೆ ಹೇಗೆ?. ನನ್ನ ಮನಸ್ಸಿಗೆ ನೋವಾಗಿದೆ, ಯಾಕೆ ಬೆಂಬಲ ಕೊಡಬೇಕು?. ಪ್ರೀತಂಗೌಡ ಯಾರು? ಪೆನ್ ಡ್ರೈವ್ ಹಂಚಿಕೆಗೆ ಯಾರು ಕಾರಣ?. ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟುವನು. ಅಂತವರ ಜೊತೆಗೆ ವೇದಿಕೆ ಮೇಲೆ ಕೂರಿಸ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಹೆಚ್​ಡಿಕೆ ಕಿಡಿ ಕಾರಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us