ರಾಜ್ಯದಲ್ಲಿ ಕಾವೇರಿದ 2024ರ ಲೋಕಸಭಾ ಚುನಾವಣೆ
ಅದರಲ್ಲೂ ಮಂಡ್ಯ ಲೋಕಸಭಾ ಕ್ಷೇತ್ರದ್ದೇ ಭಾರೀ ಸದ್ದು
ಮಾಜಿ ಸಿಎಂ ಕುಮಾರಸ್ವಾಮಿ, ಸುಮಲತಾ ಮನೆಗೆ ಭೇಟಿ
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಾವು ಜೋರಾಗಿದೆ. ಹೇಗಾದ್ರೂ ಮಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಬಿಜೆಪಿ 25 ಕ್ಷೇತ್ರಗಳಲ್ಲಿ ಕಂಟೆಸ್ಟ್ ಮಾಡುತ್ತಿದ್ದು, ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಮಂಡ್ಯದಲ್ಲಿ ಜೆಡಿಎಸ್ನಿಂದ ಖುದ್ದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರೇ ಕಣಕ್ಕಿಳಿಯುತ್ತಿದ್ದಾರೆ.
ಇನ್ನು, ಸಂಸದೆ ಸುಮಲತಾ ಅಂಬರೀಶ್ ಕೂಡ ಮಂಡ್ಯದ ಜನರಿಗೆ ನೋಯಿಸೋ ತೀರ್ಮಾನ ಮಾಡಲ್ಲ. ನಾನು ಮಂಡ್ಯದಿಂದ ಚುನಾವಣೆಗೆ ನಿಂತೇ ನಿಲ್ಲುತ್ತೇನೆ ಎಂದು ಪಣತೊಟ್ಟಿದ್ದಾರೆ. ಈ ಮಧ್ಯೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಜೆಪಿ ನಗರದಲ್ಲಿರೋ ಸಂಸದೆ ಸುಮಲತಾ ಅಂಬರೀಶ್ ಅವರ ಮನೆಗೆ ಭೇಟಿ ನೀಡಿದ್ದಾರೆ.
ತನ್ನ ಬೆಂಬಲಿಗರೊಂದಿಗೆ ಸುಮಲತಾ ಅಂಬರೀಶ್ ಮನೆಗೆ ಭೇಟಿ ನೀಡಿರೋ ಹೆಚ್ಡಿಕೆ, ಬೆಂಬಲ ಕೋರಲಿದ್ದಾರೆ. ಇಬ್ಬರು ಮಧ್ಯೆ ಮಹತ್ವದ ಮಾತುಕತೆ ನಡೆಯಲಿದೆ. ಯಾವುದೇ ಕಾರಣಕ್ಕೂ ನನ್ನ ವಿರುದ್ಧ ಚುನಾವಣೆಗೆ ನಿಲ್ಲಬೇಡಿ ಎಂದು ಕೇಳಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ರಾಜ್ಯಕ್ಕೆ ಆಗಮಿಸ್ತಿರೋ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ.. ಡಾ.ಮಂಜುನಾಥ್ ಪರ ಪ್ರಚಾರದ ಪ್ಲಾನ್ ಏನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ