ಡಾ.ರಂಗನಾಥ್ರಿಂದ ಮತ್ತೊಂದು ಮಾನವೀಯ ಸೇವೆ
ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಜನ
ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಆಪರೇಷನ್
ತುಮಕೂರು: ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ್ ಮತ್ತೊಮ್ಮೆ ತಮ್ಮ ಕರ್ತವ್ಯ ಪ್ರಜ್ಞೆಯಿಂದ ಜನರ ಹೃದಯ ಗೆದ್ದಿದ್ದಾರೆ. ಮಂಡಿ ನೋವಿನಿಂದ ಬಳಲುತ್ತಿದ್ದ ಕ್ರೀಡಾಪಟುವಿಗೆ ತಾವೇ ಶಸ್ತ್ರಚಿಕಿತ್ಸೆ ಮಾಡಿ ಬಡ ಕುಟುಂಬದ ಕೃತಜ್ಞತೆಗೆ ಪಾತ್ರರಾಗಿದ್ದಾರೆ.
ರಗ್ಬಿ ಆಟಗಾರ್ತಿ ಭವ್ಯ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಕುಣಿಗಲ್ ನಿವಾಸಿಯಾಗಿರುವ ಭವ್ಯಗೆ ಮಂಡಿ ನೋವು ಕಾಣಿಸಿಕೊಂಡಿತ್ತು. ನೋವು ನಿವಾರಣೆಗೆ ಮೊಣಕಾಲಿಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇತ್ತು. ಬಡತನ ಹಿನ್ನೆಲೆ ಶಸ್ತ್ರಚಿಕಿತ್ಸೆಗೆ ಹಣ ಹೊಂದಿಸಲು ಕುಟುಂಬ ಕಷ್ಟ ಪಡುತ್ತಿತ್ತು.
ಈ ವಿಚಾರ ಶಾಸಕರ ಗಮನಕ್ಕೆ ಬರುತ್ತಿದ್ದಂತೆಯೇ ಭವ್ಯಗೆ ಭರವಸೆ ನೀಡಿದ್ದರು. ಅಂತೆಯೇ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಪುಣ್ಯ ಕಟ್ಟಿಕೊಂಡಿದ್ದಾರೆ. ರಂಗನಾಥ್ ಅವರು ಶಾಸಕರಾದ ಮೇಲೆ ಶಸ್ತ್ರಚಿಕಿತ್ಸೆ ಮಾಡುತ್ತಿರೋದು ಇದೇ ಮೊದಲಲ್ಲ. ಇದಕ್ಕೂ ಮೊದಲು ಮೂವರಿಗೆ ಶಸ್ತ್ರಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದರು. ಶಾಸಕ ಡಾ.ರಂಗನಾಥ್ ಕಾರ್ಯ ವೈಖರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ