newsfirstkannada.com

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಾರ್ಮಿಕ ಇಲಾಖೆ ಅಧಿಕಾರಿ

Share :

Published July 1, 2023 at 8:25pm

Update July 1, 2023 at 8:19pm

    ಕಾರ್ಮಿಕ ಇಲಾಖೆ ನಿರೀಕ್ಷಕಿ ಲೋಕಾಯುಕ್ತ ಬಲೆಗೆ

    5 ಸಾವಿರ ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ಅಧಿಕಾರಿ

    ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು

ಹಾವೇರಿ: ಕಾರ್ಮಿಕ ಇಲಾಖೆ ಅಧಿಕಾರಿಯೊಬ್ಬರು ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಐದು ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಅಧಿಕಾರಿಗಳೆದುರು ಸಿಕ್ಕಿಬಿದ್ದಿದ್ದಾರೆ.

ರಾಣೇಬೆನ್ನೂರು ತಾಲೂಕು ಕಾರ್ಮಿಕ ಇಲಾಖೆ ನಿರೀಕ್ಷಕರಾದ ಮಮ್ತಾಜ್ ಬೆಗಂ ಲಂಚದ ಆಸೆಗೆ ಕೈಚಾಚುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾರ್ಮಿಕ ಇಲಾಖೆ ಕಾರ್ಡ್ ಮಾಡಿಕೊಡಲು ಲಂಚ ಪಡೆಯುತ್ತಿದ್ದಾಗ ಮಮ್ತಾಜ್ ಮುಖ ಅನಾವರಣಗೊಂಡಿದೆ.

ಕಾರ್ಮಿಕ ಇಲಾಖೆ ಕಚೇರಿಗೆ ಲೋಕಾಯುಕ್ತ ಸಿಪಿಐ ಆಂಜನೇಯ ನೇತೃತ್ವದಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಮಮ್ತಾಜ್​ ನಾರಾಯಣಪ್ಪ ಎಂಬ ಕಾರ್ಮಿಕನಿಂದ ಹಣ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಐದು ಸಾವಿರ ನಗದು ಸಮೇತ ಮಮ್ತಾಜ್ ಬೆಗಂ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಾರ್ಮಿಕ ಇಲಾಖೆ ಅಧಿಕಾರಿ

https://newsfirstlive.com/wp-content/uploads/2023/07/Mumtaz-Begam.jpg

Load More