/newsfirstlive-kannada/media/post_attachments/wp-content/uploads/2024/05/Kishan-Kumar-Bharadwaj.jpg)
ವಿಜಯಪುರ: ಕಾರ್ಮಿಕನೋರ್ವ ಆಯತಪ್ಪಿ 133 ಅಡಿ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಕೂಡಗಿ ಬಳಿಯಿರುವ ಎನ್ ಟಿಪಿಸಿ ಘಟಕದಲ್ಲಿ ನಡೆದಿದೆ. ಎನ್ ಟಿಪಿಸಿ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಕಿಶನ್ ಕುಮಾರ್ ಭಾರಧ್ವಾಜ್ (33) ಮೃತಪಟ್ಟ ಕಾರ್ಮಿಕ. ಈತ ಉತ್ತರ ಪ್ರದೇಶ ಮೂಲದ ಕಾರ್ಮಿಕನಾಗಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾನೆ.
ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಕಿಶನ್ ಕುಮಾರ್ ಭಾರಧ್ವಾಜ್ ಎನ್ಟಿಪಿಸಿ ಘಟಕದಲ್ಲಿ ಹೆಲ್ಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದನು. ವಿಜಯಪುರ ಖಾಸಗಿ ಆಸ್ಪತ್ರೆಗೆ ಕಾರ್ಮಿಕನ ಮೃತ ದೇಹ ರವಾನಿಸಲಾಗಿದೆ.
ಇದನ್ನೂ ಓದಿ: ಹಾಲಿನ ವಾಹನಕ್ಕೆ ಡಿಕ್ಕಿ ಹೊಡೆದ ಎರಡು ದ್ವಿಚಕ್ರ ವಾಹನ; ಓರ್ವ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ
ಸೂಕ್ತ ಪರಿಹಾರ ನೀಡಿ
ಇನ್ನು ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಎನ್ ಟಿಪಿಸಿ ಘಟಕದ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ. ಬೆಳಿಗ್ಗೆಯಿಂದಲೇ ಕೂಡಗಿ ಎನ್‌ಟಿ ಪಿಸಿ ಘಟಕದ ಎದುರು ಕಾರ್ಮಿಕರು ಪ್ರತಿಭಟಿಸುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ