newsfirstkannada.com

ಸಿಹಿ ಸುದ್ದಿ ಕೊಟ್ಟ ಗೊಂಬೆ.. ಸಂಭ್ರಮದಲ್ಲಿ ನೇಹಾ-ಚಂದನ್​.. ಅಭಿಮಾನಿಗಳಿಂದ ಶುಭ ಹಾರೈಕೆ

Share :

Published June 1, 2024 at 6:52am

    2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನೇಹಾ ಹಾಗೂ ಚಂದನ

    ಪತಿ ಜತೆ ವಿಡಿಯೋ ಶೇರ್​ ಮಾಡಿ ಶುಭ ಸುದ್ದಿ ಕೊಟ್ಟ ನೇಹಾ ಗೌಡ

    ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ ಈ ವಿಡಿಯೋ

ಕನ್ನಡ ಕಿರುತೆರೆಯಲ್ಲಿ ಗೊಂಬೆ ಅಂತಲೇ ಖ್ಯಾತಿ ಪಡೆದಿರೋ ನೇಹಾ ಗೌಡ ಅವರು ಇದೀಗ ಸಖತ್​ ಸುದ್ದಿಯಲ್ಲಿ ಇದ್ದಾರೆ. ಲಕ್ಷ್ಮೀ ಬಾರಮ್ಮ ಸೀರಿಯಲ್​ ಮೂಲಕ ಕನ್ನಡಿಗರ ಮನಸ್ಸಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡಿರೋ ನೇಹಾ ಗೌಡ ದಂಪತಿ ಅಭಿಮಾನಿಗಳಿಗೆ ಗುಡ್​ ನ್ಯೂಸ್​ವೊಂದನ್ನು ಕೊಟ್ಟಿದ್ದಾರೆ.

ಇದನ್ನೂ ಓದಿ: ಅನಂತ್ ಅಂಬಾನಿ ಪ್ರೀ ವೆಡ್ಡಿಂಗ್.. ಯಾವ ಸೆಲೆಬ್ರಿಟಿಗೆ ಎಷ್ಟು ಕೋಟಿ ದುಡ್ಡು?

ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಶೇರ್​ ಮಾಡಿಕೊಂಡಿರೋ ನೇಹಾ ಗೌಡ ಹಾಗೂ ಚಂದನ್ ಗೌಡ ಇದೀಗ ಮೊದಲ ಮಗುವಿನ ನಿರೀಕ್ಷಯಲ್ಲಿದ್ದಾರೆ. ಮದುವೆಯಾಗಿ 6 ವರ್ಷಗಳ ಬಳಿಕ ನೇಹಾ ಹಾಗೂ ಚಂದನ್‌ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸದ್ಯ ನೇಹಾ ಗೌಡ ಅವರು ಶೇರ್​ ಮಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

View this post on Instagram

A post shared by Neha Ramakrishna (@neharamakrishna)

ಈ ವಿಡಿಯೋ ನೋಡಿದ ಅಭಿಮಾನಿಗಳು ಫುಲ್​ ಖುಷ್​ ಆಗಿದ್ದಾರೆ. ನೇಹಾ ಗೌಡ ಅವರು ಲಕ್ಷ್ಮೀ ಬಾರಮ್ಮ ಸೀರಿಯಲ್‌ನಲ್ಲಿ ಗೊಂಬೆ ಪಾತ್ರದಲ್ಲಿ ಅಭಿನಯಿಸಿದವರು. ಗೊಂಬೆ ಪಾತ್ರದ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ನಟಿ ನೇಹಾ ಗೌಡ ಹಾಗೂ ಚಂದನ್​ ಗೌಡ ಫೆಬ್ರವರಿ 18, 2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದ್ಯ ಮದುವೆಯಾಗಿ 6 ವರ್ಷಗಳ ಬಳಿಕ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸುದ್ದಿ ತಿಳಿದು ಶುಭ ಹಾರೈಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಿಹಿ ಸುದ್ದಿ ಕೊಟ್ಟ ಗೊಂಬೆ.. ಸಂಭ್ರಮದಲ್ಲಿ ನೇಹಾ-ಚಂದನ್​.. ಅಭಿಮಾನಿಗಳಿಂದ ಶುಭ ಹಾರೈಕೆ

https://newsfirstlive.com/wp-content/uploads/2024/06/gombe.jpg

Load More