/newsfirstlive-kannada/media/post_attachments/wp-content/uploads/2025/05/bro-gowda10.jpg)
ಕನ್ನಡ ಬಿಗ್ಬಾಸ್ ಸೀಸನ್ 8ರ ಸ್ಪರ್ಧಿ, ಲಕ್ಷ್ಮೀ ಬಾರಮ್ಮ ಸೀರಿಯಲ್ ಖ್ಯಾತಿಯ ಶಮಂತ್ ಬ್ರೋ ಗೌಡ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇದನ್ನೂ ಓದಿ: ಚೈತ್ರಾ ಕುಂದಾಪುರ, ರಂಜಿತ್ ಮದುವೆಗೆ ಗೌತಮಿ ಜಾಧವ್ ಹೋಗಲಿಲ್ಲವೇಕೆ? ಈ ಬಗ್ಗೆ ಏನಂದ್ರು?
ಕುಟುಂಬಸ್ಥರ ಒಪ್ಪಿಗೆ ಮೇರೆಗೆ ತಾವು ಪ್ರೀತಿಸಿದ್ದ ಹುಡುಗಿ ಮೇಘನಾ ಜೊತೆಗೆ ಕಿರುತೆರೆ ನಟ ಶಮಂತ್ ಬ್ರೋ ಗೌಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ನಿನ್ನೆ ಅದ್ಧೂರಿಯಾಗಿ ರಿಸೆಪ್ಶನ್ ಮಾಡಿಕೊಂಡಿದ್ದರು. ಶಮಂತ್ ಬ್ರೋ ಗೌಡ ರಿಸೆಪ್ಶನ್ಗೆ ಕನ್ನಡ ಕಿರುತೆರೆ ನಟ, ನಟಿಯರು, ಗಾಯಕರು, ಸ್ಯಾಂಡಲ್ವುಡ್ ಸ್ಟಾರ್ಗಳು ಆಗಮಿಸಿ ನವ ಜೋಡಿ ಶುಭ ಹಾರೈಸಿದ್ದರು.
ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶಮಂತ್ ಬ್ರೋ ಗೌಡ ಹಾಗೂ ಮೇಘನಾಗೆ ಶುಭ ಹಾರೈಸಲು ಸ್ಟಾರ್ ನಟ ನಟಿಯರು ಆಗಮಿಸುತ್ತಿದ್ದಾರೆ.
ಇನ್ನೂ, ಎಷ್ಟೋ ಜನಕ್ಕೆ ಶಮಂತ್ ಉತ್ತರ ಕರ್ನಾಟಕದ ಹುಡುಗ ಅಂತ ಗೊತ್ತಿಲ್ಲ. ಅವರ ಪೂರ್ತಿ ಹೆಸರು ಶಮಂತ್ ಹಿರೇಮಠ. ಮೇಘನಾ ಕುಟುಂಬಸ್ಥರು ಮರಾಠಿಗರು. ಹೀಗಾಗಿ ಎರಡೂ ಶೈಲಿ ಕೊಂಚ ಸಾಮ್ಯತೆ ಇದ್ದು, ಸಂಪ್ರದಾಯಬದ್ಧವಾಗಿ ಈ ಜೋಡಿ ಅದ್ಧೂರಿಯಾಗಿ ಮದುವೆ ಮಾಡಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ