/newsfirstlive-kannada/media/post_attachments/wp-content/uploads/2024/12/Hebbalkar_CT-Ravi.jpg)
ಬೆಂಗಳೂರು: ಬೆಳಗಾವಿಯ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣೀರಿಡುತ್ತಾ ಪರಿಷತ್ ಸಭೆಯಿಂದ ಹೊರ ನಡೆದಿದ್ದಾರೆ. ಕಾಂಗ್ರೆಸ್ ನಾಯಕರು ಸಭಾಪತಿ ಅವರಿಗೆ ಸಿ.ಟಿ. ರವಿ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದರ ಮಧ್ಯೆ ಪರಿಷತ್ನಲ್ಲಿ ಸಿ.ಟಿ ರವಿ ಅವರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.
ಸಿ.ಟಿ ರವಿ ಮೇಲೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಂಡಾಮಂಡಲ
ತನ್ನ ವಿರುದ್ಧ ಮಾತಾಡಿದ್ದ ಸಿ.ಟಿ ರವಿ ಅವರನ್ನು ಲಕ್ಷ್ಮೀ ಹೆಬ್ಬಾಳ್ಕರ್ ಪರಿಷತ್ನಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ. ಏಕವಚನದಲ್ಲೇ ಮಾತಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನಿನಗೆ ತಾಯಿ ಇಲ್ವಾ? ಹೆಂಡತಿ ಇಲ್ವಾ? ಎಂದು ಸಿ.ಟಿ ರವಿ ಅವರಿಗೆ ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಏನಿದು ಆರೋಪ?
ವಿಧಾನ ಪರಿಷತ್ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಪ್ರಾಸ್ಟಿಟ್ಯೂಟ್ (ವೇ*) ಎಂಬ ಪದ ಬಳಕೆ ಮಾಡಿದ್ದಾರೆಂಬ ಆರೋಪದ ಬೆನ್ನಲ್ಲೇ ಭಾರೀ ಗದ್ದಲ ಎದ್ದಿದೆ. ಸುವರ್ಣ ಸೌಧದೊಳಗೆ ನುಗ್ಗಿದ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದರು. ಸುವರ್ಣ ಸೌಧದಲ್ಲಿ ಭಾರೀ ಭದ್ರತಾ ಲೋಪ ಕಂಡು ಬಂದಿದೆ.
ಇದನ್ನೂ ಓದಿ:ಸಿ.ಟಿ ರವಿ ಮೇಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಹಲ್ಲೆಗೆ ಯತ್ನ; ಅಸಲಿಗೆ ಆಗಿದ್ದೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ