newsfirstkannada.com

‘ಗೃಹ ಆರೋಗ್ಯ’ ಯೋಜನೆ ಪ್ರಸ್ತಾಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್; ಗೃಹಲಕ್ಷ್ಮೀ ಬಗ್ಗೆಯೂ ಮಾತು

Share :

Published August 15, 2024 at 11:00am

Update August 28, 2024 at 1:08pm

    ಸ್ವಾತಂತ್ರ್ಯೋತ್ಸವ ಭಾಷಣ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

    ರಾಜ್ಯದ್ದೇ ಪ್ರತ್ಯೇಕ ಕರ್ನಾಟಕ ಶಿಕ್ಷಣ ನೀತಿ ತರಲು ಪ್ಲಾನ್​

    ಮುಂದಿನ ತಿಂಗಳಿಂದ ಜಾರಿಯಾಗಲಿದೆ ಗೃಹ ಆರೋಗ್ಯ ಯೋಜನೆ

ಉಡುಪಿ: ಗೃಹ ಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಸ್ವಾವಲಂಬಿಗಳಾಗಿದ್ದಾರೆ. ರಾಜ್ಯದಲ್ಲಿ ಒಂದು ಕೋಟಿ ಇಪ್ಪತ್ತು ಲಕ್ಷ ಅಧಿಕ ಮಹಿಳೆಯರಿಗೆ ಯೋಜನೆಯ ಲಾಭ ಸಿಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಸ್ವಾತಂತ್ರ್ಯೋತ್ಸವ ಭಾಷಣ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಉಡುಪಿ ಜಿಲ್ಲೆಯಲ್ಲಿ 2.20 ಲಕ್ಷ ಅಧಿಕ ಮಹಿಳೆಯರಿಗೆ ಲಾಭ ಸಿಕ್ಕಿದೆ. ಕೆಲವು ತಾಂತ್ರಿಕ ದೋಷದಿಂದ ಜೂನ್ ಹಾಗೂ ಜುಲೈ ತಿಂಗಳ ಹಣ ಜಮೆಯಾಗಿಲ್ಲ. ಕಳೆದ ಗುರುವಾರದಿಂದ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮೆಯಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ, ಸ್ಥಗಿತ ಮಾಡಲ್ಲ- ಸಿಎಂ ಸಿದ್ದರಾಮಯ್ಯ ಭರವಸೆ

ಬಳಿಕ ಮಾತು ಮುಂದುವರೆಸಿದ ಅವರು, ರಾಜ್ಯದ್ದೇ ಪ್ರತ್ಯೇಕ ಕರ್ನಾಟಕ ಶಿಕ್ಷಣ ನೀತಿ ತರಲು ಸಮಿತಿ ರಚನೆ ಮಾಡಲಾಗಿದೆ. ಸಮಿತಿಯಿಂದ ಈಗಾಗಲೇ ಮಧ್ಯಂತರ ವರದಿ ಸಲ್ಲಿಕೆ ಮಾಡಲಾಗಿದೆ. ಬಹು ಧರ್ಮ, ಬಹು ಸಂಸ್ಕೃತಿ, ಬಹು ಭಾಷೆ ಇರುವ ದೇಶಕ್ಕೆ ಏಕ ಸಂಸ್ಕೃತಿ ಹೊಂದುವುದಿಲ್ಲ. ಸಾಮಾಜಿಕ ಸಾಂಸ್ಕೃತಿಕ ಆರ್ಥಿಕ ವಾಸ್ತವಂಶ ಒಳಗೊಂಡ ಶಿಕ್ಷಣ ನೀತಿಯ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪೊಲೀಸ್​ ಜೀಪ್​ ಏರಿದ ಶಿರೂರು ಶ್ವಾನ.. ತಬ್ಬಲಿಗಳ ರೋದನೆಗೆ ಮರುಗಿದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ

ಗ್ಯಾರೆಂಟಿ ಯೋಜನೆಯಿಂದ ಏಳು ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಮನೆ ಬಾಗಿಲಲ್ಲೇ ತಪಾಸಣೆ ನಡೆಸಿ ಅಗತ್ಯ ಔಷಧಿ ಒದಗಿಸುವ ಗೃಹ ಆರೋಗ್ಯ ಯೋಜನೆ ಮುಂದಿನ ತಿಂಗಳಿಂದ ರಾಜ್ಯದಲ್ಲಿ ಜಾರಿಯಾಗಲಿದೆ. ಮಧುಮೇಹ ಮತ್ತು ಅಧಿಕ ರಕ್ತದ ಒತ್ತಡ ಸಮಸ್ಯೆ ಇರುವವರಿಗೆ ಮೂರು ತಿಂಗಳಿಗೆ ಆಗುವಷ್ಟು ಮಾತ್ರೆ ಮನೆಗೆ ಒದಗಿಸುವ ಯೋಜನೆ ಜಾರಿಗೊಳಿಸಲಿದ್ದೇವೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಗೃಹ ಆರೋಗ್ಯ’ ಯೋಜನೆ ಪ್ರಸ್ತಾಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್; ಗೃಹಲಕ್ಷ್ಮೀ ಬಗ್ಗೆಯೂ ಮಾತು

https://newsfirstlive.com/wp-content/uploads/2024/08/Lakshmi-Hebbalkar.jpg

Load More