ಲಾಲು ಪ್ರಸಾದ್ ಯಾದವ್ ಆರೋಗ್ಯದಲ್ಲಿ ದಿಢೀರ್ ಏರುಪೇರು..

author-image
Ganesh
Updated On
ಲಾಲು ಪ್ರಸಾದ್ ಯಾದವ್ ಆರೋಗ್ಯದಲ್ಲಿ ದಿಢೀರ್ ಏರುಪೇರು..
Advertisment
  • ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ
  • ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್ ಆಗಿದೆ
  • 2022ರಲ್ಲಿ ಕಿಡ್ನಿ ಕಸಿ ಮಾಡಿಸಿಕೊಂಡಿರುವ ಲಾಲು

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಆರೋಗ್ಯ ಮತ್ತೆ ಹದಗೆಟ್ಟಿದೆ. ಅವರನ್ನು ದೆಹಲಿಯ ಏಮ್ಸ್‌ಗೆ ದಾಖಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯದ ಸ್ಥಿತಿ ಸ್ಥಿರವಾಗಿದ್ದು, ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಸೋಮವಾರ ಬೆಳಗ್ಗೆ ದೆಹಲಿಗೆ ತೆರಳಿದ್ದರು. ದೆಹಲಿಗೆ ತೆರಳಿದ್ದ ವೇಳೆ ಬಿಹಾರದ ನಿತೀಶ್ ಕುಮಾರ್ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದರು. ನಿನ್ನೆ ದಿಢೀರ್ ಅನಾರೋಗ್ಯ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ಲಾಲು ಪ್ರಸಾದ್ ಯಾದವ್ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಹೊರಬಿದ್ದಿದೆ. ಫೋಟೋ ನೋಡಿದ ಅವರ ಬೆಂಬಲಿಗರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ.

ಇದನ್ನೂ ಓದಿ:ಪ್ರೇಮಿಗಳಿಗಾಗಿ ತಯಾರಾಗಿದೆ ಟು ಇನ್​ ಒನ್​​ ಛತ್ರಿ.. ನಿಮ್ಮ ಪ್ರೇಯಸಿಗಾಗಿ ಖರೀದಿ ಮಾಡಿ!

ಸಿಂಗಾಪುರದಲ್ಲಿ ಕಿಡ್ನಿ ಕಸಿ
ಲಾಲು ಪ್ರಸಾದ್ ಯಾದವ್ ಅವರು ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಡಿಸೆಂಬರ್ 2022ರಲ್ಲಿ, ಲಾಲು ಪ್ರಸಾದ್ ಯಾದವ್ ಅವರು ಸಿಂಗಾಪುರದಲ್ಲಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದರು. ಲಾಲು ಯಾದವ್ ಅವರಿಗೆ ಅವರ ಪುತ್ರಿ ರೋಹಿಣಿ ಆಚಾರ್ಯ ಕಿಡ್ನಿ ದಾನ ಮಾಡಿದ್ದಾರೆ. ಇದಾದ ನಂತರ ಅವರ ಆರೋಗ್ಯ ಸಾಕಷ್ಟು ಸುಧಾರಿಸಿದೆ.

ಇದನ್ನೂ ಓದಿ:ಪ್ರೀತಿಗೆ ಅಡ್ಡಿ ಆಗಲಿಲ್ಲ ವಯಸ್ಸು.. ಅಳಿಯನ ವರ್ಷ ತಿಳಿದು ದಂಗಾದ ಪೋಷಕರು.. ಠಾಣೆಯಲ್ಲಿ ಹೈಡ್ರಾಮಾ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment