ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ.. ಹೈಕೋರ್ಟ್ ಆದೇಶದ ಪ್ರಕಾರ ತೆರವು ಕಾರ್ಯಾಚರಣೆ ಆರಂಭ

author-image
Gopal Kulkarni
Updated On
ಕುಮಾರಸ್ವಾಮಿಗೆ ಒತ್ತುವರಿ ಬಿಗ್ ಶಾಕ್‌.. ಬಿಡದಿ ತೋಟದ ಮನೆಗೆ ನುಗ್ಗಿದ JCB; ತೆರವು ಕಾರ್ಯ ಹೇಗಿದೆ?
Advertisment
  • ಹೆಚ್​.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ
  • ಒತ್ತುವರಿ ಭೂಮಿ ತೆರುವುಗೊಳಿಸಲು ಹೈಕೋರ್ಟ್ ಆದೇಶ
  • ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ ಆರಂಭ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್​​.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್​ನಿಂದ ಖಡಕ್ ಸೂಚನೆಯೂ ಕೂಡ ಬಂದಿತ್ತು. ಹೈಕೋರ್ಟ್ ಆದೇಶದ ಪ್ರಕಾರ ಕಂದಾಯ ಇಲಾಖೆ ಈಗ ಒತ್ತುವರಿ ಕಾರ್ಯಾಚರಣೆಗೆ ಮುಂದಾಗಿದೆ.

ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್​ಐಟಿ ರಚನೆ ಮಾಡಿಕೊಂಡಿತ್ತು ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿ ಬಂದಿತ್ತು. 14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು.

ಇದನ್ನೂ ಓದಿ:ರಾಜ್ಯ ಕಾಂಗ್ರೆಸ್​ ಅಧ್ಯಕ್ಷರಾಗಿ ಮಂಜುನಾಥ್ ಪದಗ್ರಹಣ.. ಶಿಷ್ಯನಿಗೆ ಅಧಿಕಾರ ನೀಡಿ ಬೀಗಿದ ಡಿಕೆಶಿ

ಈ ಹಿನ್ನೆಲೆ ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಇಂದು ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ. ಹೆಚ್​​.ಡಿ ಕುಮಾರಸ್ವಾಮಿಯವರ ತೋಟದ ಮನೆಯ ಸುತ್ತಮುತ್ತಲಿನ ಒತ್ತುವರಿ ಜಾಗದ ತೆರವಿಗೆ ಸಿದ್ಧತೆಮಾಡಿಕೊಳ್ಳಲಾಗಿದೆ. ಈಗಾಗಲೇ ಹೆಚ್​ಡಿಕೆ ತೋಟದ ಮನೆಯ ಮುಂದೆ ಎರಡು ಜೆಸಿಬಿಗಳು ಬಂದು ನಿಂತಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment