/newsfirstlive-kannada/media/post_attachments/wp-content/uploads/2025/05/MNG-GUDDA-KUSITA.jpg)
ರಾಜ್ಯದ ಕೆಲವೆಡೆ ಭಾರೀ ಗುಡ್ಡ ಕುಸಿತ ಆಗಲಿದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೇ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಜೊತೆಗೆ ಹವಾಮಾನ ಇಲಾಖೆ ಗುಡ್ಡ ಕುಸಿತದ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ:ಸಿನಿಮಾವನ್ನೂ ಮೀರಿಸುವಂತಿದೆ ಸೋನಂ ಪ್ಲಾನ್.. ತನಿಖೆಯಲ್ಲಿ ಪ್ರತಿ ಸನ್ನಿವೇಶಗಳೂ ಮರುಸೃಷ್ಟಿ..
ಘಾಟ್ ಪ್ರದೇಶದಲ್ಲಿ ಗುಡ್ಡ ಕುಸಿತ ಆಗಬಹುದು ಅಂತ ಮುನ್ನಚ್ಚರಿಕೆ ನೀಡಿಲಾಗಿದೆ. ಹೀಗಾಗಿ ಈ ಮೂರು ಜಿಲ್ಲೆಗಳ ಘಾಟ್ ಭಾಗದಲ್ಲಿ ಮಾತ್ರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದಂತೆ ಕೆಲವು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಇನ್ನೂ, ಬೆಂಗಳೂರು ಸೇರಿದ ಜಿಲ್ಲೆಯಲ್ಲಿ ಸಾಧಾರಣ ಮಳೆ, ಶೀತ ವಾತಾವರಣ ಮುಂದುವರಿಕೆಯಾಗಿದೆ ಎಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ