ಮಹಾಕುಂಭ ಮೇಳದಲ್ಲಿ ಸ್ಟೀವ್ ಜಾಬ್ಸ್ ಪತ್ನಿ ಅಸ್ವಸ್ಥ.. ಪುಣ್ಯ ಸ್ನಾನಕ್ಕೆ ಬಂದಾಗ ಏನಾಯ್ತು..?

author-image
Ganesh
Updated On
ಸ್ಟೀವ್ ಜಾಬ್ಸ್ ಪತ್ನಿಗೆ ಆಧ್ಯಾತ್ಮಿಕ ದೀಕ್ಷೆ ನೀಡಿದ ಸ್ವಾಮಿ ಕೈಲಾಶಾನಂದ ಗಿರಿ ಯಾರು..?
Advertisment
  • ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ಮೇಳ
  • ಮಹಾಕುಂಭಕ್ಕೆ ಕೋಟಿ ಕೋಟಿ ಭಕ್ತರು ಆಗಮನ
  • ವಿದೇಶಗಳಿಂದಲೂ ಮಹಾಕುಂಭಕ್ಕೆ ಬರ್ತಿದ್ದಾರೆ ಭಕ್ತರು

Apple ಸಹ ಸಂಸ್ಥಾಪಕ ಸ್ಟೀವ್ ಜಾಬ್ಸ್ (Steve Jobs) ಪತ್ನಿ ಲಾರೆನ್ ಪೊವೆಲ್ ಜಾಬ್ಸ್ (Laurene Powell Jobs) ಕುಂಭಮೇಳದಲ್ಲಿ ಭಾಗವಹಿಸಲು ಉತ್ತರ ಪ್ರದೇಶದ ಪ್ರಯಾಗರಾಜ್‌ಗೆ ಬಂದಿದ್ದಾರೆ.

ಕಾಶಿ ವಿಶ್ವನಾಥನ ದೇಗುಲಕ್ಕೆ ಭಾನುವಾರ ಭೇಟಿ ನೀಡಿದ್ದ ಲಾರೆನ್, ಸೋಮವಾರ ಪ್ರಯಾಗರಾಜ್ ತಲುಪಿದ್ದಾರೆ. ಕುಂಭಮೇಳದ ಎರಡನೇ ದಿನವಾದ ನಿನ್ನೆ ಅವರು ಅಸ್ವಸ್ಥರಾದರು. ಅನಾರೋಗ್ಯದ ಕಾರಣ ಮಂಗಳವಾರ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಸಾಧ್ಯವಾಗಲಿಲ್ಲ. ಅಲ್ಲಿನ ಪರಿಸರಕ್ಕೆ ಅವರು ಹೊಂದಿಕೊಳ್ಳಲಾಗದೇ ಕಷ್ಟ ಅನುಭವಿಸಿದರು.

ಇದನ್ನೂ ಓದಿ: ದಕ್ಷಿಣ ಭಾರತದ ಕುಂಭ ಎಂದೇ ಪ್ರಖ್ಯಾತಿ.. ಗವಿ ಸಿದ್ದೇಶ್ವರ ಜಾತ್ರೆಗೆ ಎಷ್ಟು ಲಕ್ಷ ಭಕ್ತರು ಬರುವ ನಿರೀಕ್ಷೆ ಇದೆ..?

publive-image

ತ್ರಿವೇಣಿ ಸಂಗಮದಲ್ಲಿ ಇನ್ನೂ ಅವರಿಗೆ ಸ್ನಾನ ಮಾಡಲು ಸಾಧ್ಯವಾಗಿರಲಿಲ್ಲ. ಅನಾರೋಗ್ಯದಿಂದ ಚೇತರಿಸಿಕೊಂಡ ನಂತರ ಪವಿತ್ರ ಸ್ನಾನ ಮಾಡಲಿದ್ದಾರೆ. ಸದ್ಯ ಅವರು ನಿರಂಜನಿ ಅಖಾಡದ (Niranjani akhada) ಮಹಾ ಮಂಡಲೇಶ್ವರ ಸ್ವಾಮಿ ಕೈಲಾಸಾನಂದ ಗಿರಿ ಮಹಾರಾಜ್ ಸ್ಥಾಪಿಸಿರುವ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಜಾಬ್ಸ್​ ಪತ್ನಿ ಇಲ್ಲಿಯವರೆಗೆ ಇಷ್ಟೊಂದು ಪ್ರಮಾಣದ ಜನಸಾಗರ ನೋಡಿರಲಿಲ್ಲ. ಅವರು ಅಲರ್ಜಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಶಿಬಿರದಲ್ಲಿ ಚೇತರಿಸಿಕೊಳ್ತಿದ್ದು, ಚಿಕಿತ್ಸೆ ಮುಂದುವರಿದಿದೆ. ಜನವರಿ 20ರಂದು ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಶೀಘ್ರದಲ್ಲೇ ತೆರಳಲಿದ್ದಾರೆ. ಅಲ್ಲಿಯವರೆಗೂ ಶಿಬಿರದಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ.

ಇದನ್ನೂ ಓದಿ: ದಕ್ಷಿಣ ಭಾರತದ ಕುಂಭ ಎಂದೇ ಪ್ರಖ್ಯಾತಿ.. ಗವಿ ಸಿದ್ದೇಶ್ವರ ಜಾತ್ರೆಗೆ ಎಷ್ಟು ಲಕ್ಷ ಭಕ್ತರು ಬರುವ ನಿರೀಕ್ಷೆ ಇದೆ..?

ಕುಂಭಮೇಳದಲ್ಲಿ ಪಾಲ್ಗೊಳ್ಳಲು ದೇಶ ವಿದೇಶಗಳಿಂದ ಕೋಟ್ಯಂತರ ಭಕ್ತರು ತ್ರಿವೇಣಿ ಸಂಗಮಕ್ಕೆ ಆಗಮಿಸುತ್ತಿದ್ದಾರೆ. ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಈ ಕುಂಭಮೇಳ ಸೋಮವಾರದಿಂದ ಆರಂಭವಾಗಿದೆ. ಫೆ.26ರವರೆಗೆ ನಡೆಯಲಿದೆ ಮಹಾಕುಂಭಮೇಳದಲ್ಲಿ 40 ಕೋಟಿಗೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮೊದಲ ದಿನ ಸುಮಾರು 1.65 ಕೋಟಿ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment