/newsfirstlive-kannada/media/post_attachments/wp-content/uploads/2024/05/DEVARAJEGOWDA-2-1.jpg)
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಸಿದೆ. ಲಾಯರ್ ದೇವರಾಜೇಗೌಡ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ವಾದ ಮಂಡಿಸಿದ್ದಾರೆ.
ಇದನ್ನೂ ಓದಿ:ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಮಗುವಿನ ಮೃತದೇಹ.. ಬೆಳಗ್ಗೆ ಉಯ್ಯಾಲೆಯಲ್ಲಿ ಪ್ರತ್ಯಕ್ಷ..! ಗಾಬರಿಬಿದ್ದ ಜನ
2023 ಡಿಸೆಂಬರ್ 29ರಂದು ಅತ್ಯಾಚಾರವೆಂದು 2024ರ ಏಪ್ರಿಲ್ 1ರಂದು ದೂರು ನೀಡಿದ್ದರು. ಇದಕ್ಕೂ ಮೊದಲು ಹನಿಟ್ರ್ಯಾಪ್ ಎಂದು ದೇವರಾಜೇಗೌಡ ಮಾರ್ಚ್ 28 ರಂದು ದೂರು ನೀಡಿದ್ದಾರೆ. ಮಾರ್ಚ್ 29 ರಂದು ದೇವರಾಜೇಗೌಡ ವಿರುದ್ಧ ಸಂತ್ರಸ್ತೆಯ ಗಂಡ ದೂರು ನೀಡಿದ್ದಾನೆ. ಆದರೆ ಅತ್ಯಾಚಾರದ ಬಗ್ಗೆ ಯಾವುದೇ ಚಕಾರವಿಲ್ಲ. ಪ್ರಕರಣದಲ್ಲಿ ಪೊಲೀಸರು ಬಿ- ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ದೇವರಾಜೇಗೌಡ ಪರ ಹಿರಿಯ ವಕೀಲ ವಾದ ಮಂಡಿಸಿದ್ದಾರೆ.
ಇದನ್ನೂ ಓದಿ: ರೋಹಿತ್ ಶರ್ಮಾ ಟೀಮ್ ಬಗ್ಗೆ KL ರಾಹುಲ್ ಏನಂದ್ರು..? ವಿಶ್ವಕಪ್ ಗೆಲುವಿನ ಬಗ್ಗೆ ಕನ್ನಡಿಗನ ಮನದ ಮಾತುಗಳು
ಘಟನೆ ನಡೆದ ಬಳಿಕ 90 ದಿನ ಅಂದರೆ ಬರೋಬ್ಬರಿ 3 ತಿಂಗಳು ವಿಳಂಬದ ನಂತರ ದೂರು ದಾಖಲಿಸಿದ್ದಾರೆ. ವಿಡಿಯೋ ಕಾಲ್ಗಳನ್ನು ಯಾಕೆ ಸ್ವೀಕರಿಸಿದ್ದಾರೆ ಎಂಬುದಕ್ಕೆ ಸಮರ್ಥನೆಗಳು ಕಂಡುಬರುತ್ತಿಲ್ಲ ಎಂದು ನ್ಯಾಯಾಧೀಶರಿಗೆ ಅರುಣ್ ಶ್ಯಾಮ್ ಅವರು ಮನವರಿಕೆ ಮಾಡಿಕೊಟ್ಟರು. ವಾದ- ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಜಾಮೀನು ಮಂಜೂರು ಮಾಡಿ ನ್ಯಾ.ಎಂ.ಜಿ ಉಮಾರಿದ್ದ ಪೀಠ ಆದೇಶ ಹೊರಡಿಸಿದೆ.
ಇದನ್ನೂ ಓದಿ: ನಟ ದರ್ಶನ್ ತಾಯಿ ಮೀನಾ, ಸಹೋದರ ದಿನಕರ ಜೈಲಿಗೆ ಭೇಟಿ.. ಮಗನ ಸಂಕಟ ನೋಡಿ ಅಮ್ಮ ಭಾವುಕ..
ಅತ್ಯಾಚಾರ ಕೇಸ್ನಲ್ಲಿ ವಕೀಲ ದೇವರಾಜೇಗೌಡ ಅವರನ್ನ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ್ದ ಕೋರ್ಟ್ ಮೇ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ಕಾರಾಗೃಹದಲ್ಲಿ ಇಷ್ಟು ದಿನ ಇದ್ದರು. ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಕೈವಾಡ ಇದೆ ಎಂದು ದೇವರಾಜೇಗೌಡ ಆರೋಪ ಮಾಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ