/newsfirstlive-kannada/media/post_attachments/wp-content/uploads/2024/10/jagadish-lawyer.jpg)
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11ರಿಂದ ನಿನ್ನೆಯ ಸಂಚಿಕೆಯಲ್ಲಿ ಲಾಯರ್ ಜಗದೀಶ್ ಔಟ್ ಆಗಿದ್ದಾರೆ. ಬಿಗ್ಬಾಸ್ ಗ್ರ್ಯಾಂಡ್ ಓಪನಿಂಗ್ ದಿನ ರಾಯಲ್ ಆಗಿ ಎಂಟ್ರಿ ಕೊಟ್ಟಿದ್ದ ಜಗದೀಶ್ ಆಚೆ ಬಂದಿದ್ದಾರೆ.
ಇದನ್ನೂ ಓದಿ:BIG BREAKING: ಬಿಗ್ ಬಾಸ್‌ಗೆ ಗುಡ್ ಬೈ.. ಕೊನೆಗೂ ಮನೆಯಿಂದ ಹೊರ ಬಂದ ಜಗದೀಶ್!
ಹೌದು, ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ಮೊದಲ ದಿನದಿಂದಲೇ ಲಾಯರ್ ಜಗದೀಶ್ ಒಂದು ಹವಾ ಕ್ರಿಯೇಟ್ ಮಾಡಿದ್ದರು. ಇದರಿಂದಲೇ ಕ್ರಶ್ ಆಫ್ ಕರ್ನಾಟಕ ಪಟ್ಟ ಕೂಡ ಗಿಟ್ಟಿಸಿಕೊಂಡಿದ್ದರು. ಆದರೆ ನಿನ್ನೆ ಬಿಗ್ಬಾಸ್ ಮನೆಯಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಅಂತ ಆರೋಪ ಕೇಳಿ ಬಂದಿತ್ತು.
ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಗ್ಬಾಸ್ ನಟ ರಂಜಿತ್ ಹಾಗೂ ಲಾಯರ್ ಜಗದೀಶ್ ಅವರನ್ನು ಬಿಗ್ಬಾಸ್ ಮುಖ್ಯ ದ್ವಾರದಿಂದ ಆಚೆ ಕಳುಹಿಸಿದ್ದಾರೆ. ಬಿಗ್ಬಾಸ್ ಮನೆಯಿಂದ ಆಚೆ ಬಂದ ಬಳಿಕ ಲಾಯರ್ ಜಗದೀಶ್ ಅವರು ಬೇಸರ ಹೊರ ಹಾಕಿದ್ದರು.
ಇದೀಗ ಬಿಗ್ಬಾಸ್ ಶೋಯಿಂದ ಆಚೆ ಬಂದ ಬೆನ್ನಲ್ಲೇ ಫೇಸ್ಬುಕ್ ಖಾತೆಯಲ್ಲಿ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಹೌದು ಮೂರು ವಾರಗಳ ಕಾಲ ಬಿಗ್ಬಾಸ್ ಮನೆಯಲ್ಲಿ ಸಖತ್ ಸೌಂಡ್ ಮಾಡುತ್ತಿದ್ದ ಲಾಯರ್ ಜಗದೀಶ್ ಸದ್ಯ ಸಖತ್ ಕೂಲ್ ಆಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇದೇ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ