/newsfirstlive-kannada/media/post_attachments/wp-content/uploads/2024/10/JAGADISH-1.jpg)
ಬೆಂಗಳೂರು: ಕೊಡಿಗೇಹಳ್ಳಿಯ ಸ್ಥಳೀಯರು ಹಾಗೂ ಲಾಯರ್ ಜಗದೀಶ್ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರಿಯೇ ಪೊಲೀಸರು ಲಾಯರ್ ಜಗದೀಶ್, ಪುತ್ರ ಹಾಗೂ ಇಬ್ಬರು ಗನ್ಮ್ಯಾನ್ಗಳನ್ನ ಅರೆಸ್ಟ್ ಮಾಡಿದ್ದಾರೆ.
ಗಲಾಟೆಯಲ್ಲಿ ಲಾಯರ್ ಜಗದೀಶ್ ಅವರು ಗಾಯಗೊಂಡಿದ್ದರು. ಅವರ ಮೂಗಿನಿಂದ ರಕ್ತ ಬರುತ್ತಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಮಾತನಾಡಿದ್ದರು. ನಿನ್ನೆ ನಡೆದ ಘಟನೆಯಲ್ಲಿ ಜಗದೀಶ್ ಗಾಯಗೊಂಡಿದ್ದಕ್ಕೆ ಪೊಲೀಸರೇ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಮೆಡಿಕಲ್ ಚೆಕಪ್ ಮಾಡಿಸಿ ಪೊಲೀಸರು ಜಗದೀಶ್, ಅವರ ಮಗ ಆರ್ಯನ್ ಹಾಗೂ ಇಬ್ಬರು ಗನ್ ಮ್ಯಾನ್ಗಳನ್ನು ಅರೆಸ್ಟ್ ಮಾಡಿದ್ದಾರೆ.
ಇದನ್ನೂ ಓದಿ:BIGG BOSS ಗ್ರ್ಯಾಂಡ್ ಫಿನಾಲೆ ಸ್ಟೇಜ್ ಮೇಲೆ ಕಿಚ್ಚ ಸುದೀಪ್ ಸಖತ್ ಸ್ಟೆಪ್ಸ್.. ಫುಲ್ ಕ್ಲಾಸ್ ಈ ‘ಮ್ಯಾಕ್ಸ್’
ಇಂದು 11 ಗಂಟೆಯ ಬಳಿಕ ಜಗದೀಶ್ರನ್ನು ನ್ಯಾಯಾಲಯದ ಮುಂದೆ ಪೊಲೀಸರು ಹಾಜರು ಪಡಿಸಲಿದ್ದಾರೆ. ಜಗದೀಶ್ ವಿರುದ್ಧ ಸ್ಥಳೀಯರು ದೂರು ನೀಡಿದ್ದಾರೆ. ಇದಕ್ಕೆ ಜಗದೀಶ್ ಕೂಡ ಪ್ರತಿ ದೂರು ದಾಖಲು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಏನಿದು ಗಲಾಟೆ?
ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ಅಣ್ಣಮ್ಮ ದೇವಿಯ ಉತ್ಸವದ ವಿಚಾರವಾಗಿ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಹಾಗೂ ಸ್ಥಳೀಯರ ಮಧ್ಯೆ ಮಾರಾಮಾರಿಯಾಗಿದೆ. ಯಾವುದೇ ಅನುಮತಿ ಪಡೆಯದೇ ರಸ್ತೆಗೆ ಅಡ್ಡವಾಗಿ ಪೆಂಡಾಲ್ ಹಾಕಲಾಗಿದೆ ಎಂದು ವಕೀಲ ಜಗದೀಶ್ ಬಿಬಿಎಂಪಿ ಹಾಗೂ ಪೊಲೀಸರಿಗೆ ಎರಡು ದಿನದ ಹಿಂದೆ ದೂರು ನೀಡಿದ್ದರು. ಇದಕ್ಕೆ ಕೋಪಗೊಂಡಿದ್ದ ಸ್ಥಳೀಯರು ವಕೀಲ ಜಗದೀಶ್ ಮನೆ ಬಳಿ ತೆರಳಿ ಗಲಾಟೆ ಮಾಡಿದ್ದರು. ಈ ಬಗ್ಗೆ ಜನವರಿ 23 ರಂದು ಕೊಡಿಗೆಹಳ್ಳಿ ಠಾಣೆಯಲ್ಲಿ ನಾಗರಾಜ್ ಎನ್ನುವವರ ವಿರುದ್ಧ ಜಗದೀಶ್ ದೂರು ನೀಡಿದ್ರೆ, ಜಗದೀಶ್ ವಿರುದ್ಧವೂ ಪ್ರತಿದೂರು ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ