ಗೃಹಲಕ್ಷ್ಮೀ ಯೋಜನೆಗೆ ಒಂದು ವರ್ಷ ತುಂಬಿದ ಸಂತಸದಲ್ಲಿ ಸರ್ಕಾರ
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಭರ್ಜರಿ ಆಫರ್
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು
ಬೆಂಗಳೂರು: ನೀವು ಕುಟುಂಬದ ಯಜಮಾನಿಯಾ? ನಿಮಗೆ ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆಯಡಿ ಎರಡು ಸಾವಿರ ರೂಪಾಯಿ ಬರುತ್ತಿದೆಯಾ? ಹಾಗಿದ್ರೆ ರಾಜ್ಯ ಸರ್ಕಾರ ನಿಮಗೆ ಮತ್ತೊಂದು ಭರ್ಜರಿ ಆಫರ್ ಕೊಡುತ್ತಿದೆ. ಇದನ್ನು ಖುದ್ದು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ ಹೇಳಿದ್ದಾರೆ.
ಇದನ್ನೂ ಓದಿ: ಮೆಗಾ ಸ್ಟಾರ್ ಚಿರಂಜೀವಿ ಜೊತೆ ಶಾಸಕ ಪ್ರದೀಪ್ ಈಶ್ವರ್ ಅಭಿನಯ; ಸಿನಿಮಾ ಯಾವುದು?
ರಾಜ್ಯದ ಕುಟುಂಬದ ಯಜಮಾನಿಯರಿಗೆ ಸಂತಸದ ಸುದ್ದಿ ನೀಡಿದ್ದಾರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್. ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅತ್ಯುತ್ತಮ ಅವಕಾಶ ಕಲ್ಪಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯು ಜಾರಿಗೆ ಬಂದು ಇಲ್ಲಿಗೆ ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ಕುಟುಂಬದ ಎಲ್ಲಾ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಒಂದು ಬಹುಮಾನವನ್ನೂ ಘೋಷಿಸಿದ್ದಾರೆ. ಇಲ್ಲಿಯವರೆಗೆ ಗೃಹಲಕ್ಷ್ಮೀ ಫಲಾನುಭವಿಗಳಾದ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆಯನ್ನು ಈ ಒಂದು ವರ್ಷದಲ್ಲಿ ತಂದಿದೆ ಎನ್ನುವುದನ್ನು ಯಜಮಾನಿಯರು ಹಂಚಿಕೊಳ್ಳಲು ಸಚಿವರು ಕೋರಿದ್ದಾರೆ.
ಇದನ್ನೂ ಓದಿ: ದೆಹಲಿಯಲ್ಲಿ ಪಟ್ಟು ಸಡಿಲಿಸದ ಸೈನಿಕ; ಬೈ ಎಲೆಕ್ಷನ್ ಬಗ್ಗೆ ಮೈತ್ರಿ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರ ಏನು?
ರಾಜ್ಯದ ಕೋಟ್ಯಂತರ ಮನೆಯೊಡತಿಯರ ಕುಟುಂಬ ನಿರ್ವಹಣೆಯ ಜವಾಬ್ದಾರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಂಭ್ರಮದಲ್ಲಿದೆ.
ಮನೆಯೊಡತಿಯರಿಗೆ/ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯಿಂದ ಏನೆಲ್ಲ ಬದಲಾವಣೆಗಳಾಗಿವೆ ಎಂಬುದನ್ನು ತಿಳಿದುಕೊಳ್ಳಲು ಕಾತುರಳಾಗಿದ್ದೇನೆ.… pic.twitter.com/qraG6NGXSI
— Laxmi Hebbalkar (@laxmi_hebbalkar) September 1, 2024
ರೀಲ್ಸ್ ಮಾಡುವ ಮೂಲಕ ಸರ್ಕಾರದ ಬಹುಮಾನ ಗೆಲ್ಲಿ.
ಸಾಮಾಜಿಕ ಜಾಲತಾಣಗಳಾದ ಯೂಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್‌ಗಳಲ್ಲಿ ಶೇರ್ ಮಾಡುವ ಮೂಲಕ ಅದನ್ನು ಹಂಚಿಕೊಳ್ಳುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೋರಿದ್ದಾರೆ. ಯಾವ ಯಜಮಾನಿಯರು ಮಾಡಿದ ರೀಲ್ಸ್‌ಗೆ ಹೆಚ್ಚು ವಿವರ್ಸ್ ಬಂದಿದೆಯೋ ಅಂತಹ ಯಜಮಾನಿಯರಿಗೆ ಒಂದು ಬಹುಮಾನ ಘೋಷಿಸಿದ್ದಾರೆ. ಇಲ್ಲಿಂದ ಒಂದು ತಿಂಗಳು ಅಂದರೆ ಸೆಪ್ಪಂಬರ್ 30ನೇ ತಾರೀಖಿನವರೆಗೆ ಯಜಮಾನಿಯರು ತಮ್ಮ ರೀಲ್ಸ್ ಗಳನ್ನು ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್‌ಗಳಲ್ಲಿ ಹಂಚಿಕೊಳ್ಳಬೇಕಿದೆ. ಅತಿ ಹೆಚ್ಚು ವೀಕ್ಷಣೆ ಪಡೆದ ವಿಡಿಯೋ ಮಾಡಿದ ಯಜಮಾನಿಯರಿಗೆ ಸಚಿವರು ವೈಯಕ್ತಿಕವಾಗಿ ಒಂದು ಬಹುಮಾನವನ್ನು ನೀಡಲಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೀವ್ಸ್ ಪಡೆದ ಮೊದಲ 50 ಯಜಮಾನಿಯರಿಗೆ ವೈಯಕ್ತಿಕವಾಗಿ ಬಹುಮಾನ ಕೊಡುವುದಾಗಿ ಸಚಿವರು ಹೇಳಿದ್ದಾರೆ. ಈ ಒಂದು ಗೃಹಲಕ್ಷ್ಮೀ ಯೋಜನೆಯಿಂದ ಜೀವನದಲ್ಲಿ ಆದ ಬದಲಾವಣೆಯನ್ನು ನಮ್ಮೆಲ್ಲ ಕರ್ನಾಟಕದ ಜನರ ಮುಂದೆ ಹಂಚಿಕೊಳ್ಳಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಯೋಜನೆಯ ಎಲ್ಲ ಯಜಮಾನಿಯರಲ್ಲಿ ಮನವಿ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ