ಛತ್ರಪತಿ ಶಿವಾಜಿ ಹೆಸರಿನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಮಾಣ ವಚನ
ರಮೇಶ್ ಜಾರಕಿಹೊಳಿಗೆ ಇಲ್ಲೂ ಟಾಂಗ್ ಕೊಟ್ರಾ ಶಾಸಕಿ
ಡಬಲ್ ಖುಷಿಯಲ್ಲಿದ್ದಾರೆ ಲಕ್ಷ್ಮಿ ಹೆಬ್ಬಾಳ್ಕರ್!
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಮತ ಪಡೆದಿಕೊಂಡ ಕಾಂಗ್ರೆಸ್ ಪಕ್ಷವು ಬಹುಮತದಿಂದ ಆಡಳಿತ ನಡೆಸುತ್ತಿದೆ. ಇದೀಗ ಕಾಂಗ್ರೆಸ್ ಸರ್ಕಾರದ ನೂತನ ಸಚಿವರ ಪಟ್ಟಿ ಹೊರಬಿದ್ದಿದೆ. ಭಾರೀ ಲೆಕ್ಕಾಚಾರ ಮಾಡಿ ಸಮುದಾಯವಾರು ಸಚಿವ ಸ್ಥಾನ ಹಂಚಿಕೆ ಮಾಡಲಾಗಿದೆ. ಅಳೆದು ತೂಗಿ ನೂತನ 24 ಸಚಿವರ ಪಟ್ಟಿಯನ್ನ ಹೈಕಮಾಂಡ್ ರಿಲೀಸ್ ಮಾಡಿದೆ. ಇನ್ನು, ಈ ಸಚಿವರ ಪಟ್ಟಿಯಲ್ಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮೊಟ್ಟ ಮೊದಲ ಬಾರಿಗೆ ಮಂತ್ರಿ ಸ್ಥಾನ ಪಡೆದುಕೊಂಡಿದ್ದಾರೆ. ಇಂದು ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಗಜ್ಯೋತಿ ಬಸವೇಶ್ವರ, ಛತ್ರಪತಿ ಶಿವಾಜಿ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದ್ದಾರೆ.
ಸಾಹುಕಾರ್ಗೆ ಟಾಂಗ್ ಕೊಟ್ರಾ ಹೆಬ್ಬಾಳ್ಕರ್
ಮಾ.2ರಂದು ಬಸವರಾಜ ಬೊಮ್ಮಾಯಿಯವರು ಬೆಳಗಾವಿಯ ರಾಜಹಂಸಗಡ ಕೋಟೆಯಲ್ಲಿರುವ ಶಿವಾಜಿ ಪ್ರತಿಮೆಯನ್ನು ಅನಾವರಣಗೊಳಿದ್ದರು. ರಮೇರ್ಶ್ ಜಾರಕಿಹೊಳಿ ಅವರು ಬೊಮ್ಮಾಯಿಯನ್ನು ಕರೆಸಿಕೊಂಡು ಈ ಅನಾವರಣ ಕಾರ್ಯಕ್ರಮ ನೆರವೇರಿಸಿದ್ದರು. ಆದರೆ ಅದರ ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಅದೇ ಪ್ರತಿಮೆಯನ್ನ ಉದ್ಘಾಟಿಸಿದ್ದರು.
ಸಂತಸದಲ್ಲಿ ಹೆಬ್ಬಾಳ್ಕರ್
ಇದೀಗ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇಂದು ಡಬಲ್ ಖುಷಿಯಲ್ಲಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಸೊಸೆ ಹಿತಾ ಹೆಬ್ಬಾಳ್ಕರ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮನೆಗೆ ಮೊಮ್ಮಗಳು ಮಹಾಲಕ್ಷ್ಮೀಯ ಆಗಮನವಾಗಿದ್ದು ಲಕ್ಷ್ಮೀ ಹೆಬ್ಬಾಳ್ಕರ್ ಫುಲ್ ಖುಷ್ ಆಗಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಮಾಡಿದ 24 ನೂತನ ಸಚಿವರ ಪಟ್ಟಿ ಇಲ್ಲಿದೆ…
ಹೆಚ್.ಕೆ.ಪಾಟೀಲ್, ಕೃಷ್ಣಬೈರೇಗೌಡ, ಚೆಲುವರಾಯಸ್ವಾಮಿ, ಕೆ.ವೆಂಕಟೇಶ್, ಡಾ.ಹೆಚ್.ಸಿ.ಮಹದೇವಪ್ಪ, ಈಶ್ವರ್ ಖಂಡ್ರೆ, ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ್, ಶಿವಾನಂದ್ ಪಾಟೀಲ್, ಆರ್.ಬಿ.ತಿಮ್ಮಾಪುರ, S.S.ಮಲ್ಲಿಕಾರ್ಜುನ್, ಶಿವರಾಜ್ ತಂಗಡಗಿ, ಡಾ.ಶರಣಪ್ರಕಾಶ್ ಪಾಟೀಲ್, ಮಂಕಾಳ ವೈದ್ಯ, ಲಕ್ಷ್ಮಿ ಹೆಬ್ಬಾಳ್ಕರ್, ರಹೀಂ ಖಾನ್, ಡಿ.ಸುಧಾಕರ್, ಸಂತೋಷ್ ಲಾಡ್, ಎನ್.ಎಸ್.ಬೋಸರಾಜು, ಬೈರತಿ ಸುರೇಶ್, ಮಧು ಬಂಗಾರಪ್ಪ, ಡಾ.ಎಂ.ಸಿ.ಸುಧಾಕರ್, ಬಿ.ನಾಗೇಂದ್ರ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ