/newsfirstlive-kannada/media/post_attachments/wp-content/uploads/2024/06/Siddaramaiah-on-Dkshivakumar-1.jpg)
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಪರ ಚಂದ್ರಶೇಖರನಾಥ್ ಸ್ವಾಮೀಜಿ ಇಂದು ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಕೆಂಪೇಗೌಡರ ಜಯಂತಿಯ ವೇದಿಕೆಯಲ್ಲಿ ಚಂದ್ರಶೇಖರನಾಥ್ ಸ್ವಾಮೀಜಿ ಅವರ ಹೇಳಿಕೆ ಹೊಸ ಸಂಚಲನಕ್ಕೆ ಕಾರಣವಾಗಿದೆ.
ಕೆಂಪೇಗೌಡ ಅವರ ಜಯಂತಿ ಆಚರಣೆ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ, ನೇರವಾಗಿ ಡಿ.ಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಬಳಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: DK ಶಿವಕುಮಾರ್ ಶಾಲು ಸಂಕಷ್ಟ.. ‘ಹೊಸ ಅಸ್ತ್ರ’ ಪ್ರಯೋಗಿಸಿದ ಬಿಜೆಪಿ, ಏನದು..
‘ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡಲಿ’
ಈಗಾಗಲೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯ ಅನುಭವ ಹೊಂದಿದ್ದಾರೆ. ಸದ್ಯ ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಅವಕಾಶ ಮಾಡಿಕೊಡಬೇಕಿದೆ. ಈ ನಿಟ್ಟಿನಲ್ಲಿ ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟು ಕೊಡಲಿ. ಸಿಎಂ ಸಿದ್ದರಾಮಯ್ಯ ದೊಡ್ಡ ಮನಸ್ಸು ಮಾಡಿ ಸಿಎಂ ಸ್ಥಾನ ಬಿಟ್ಟು ಕೊಡಲಿ ಎಂದ ಸ್ವಾಮೀಜಿ ಹೇಳಿದ್ದಾರೆ.
ಸ್ವಾಮೀಜಿ ಹೇಳಿಕೆ ಸಿಎಂ ಹೇಳಿದ್ದೇನು?
ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟು ಕೊಡಬೇಕು ಅನ್ನೋ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬದಲಾವಣೆಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದಷ್ಟೇ ಹೇಳಿದರು. ಈ ಬೆಳವಣಿಗೆಯ ಮಧ್ಯೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಇಂದು ದೆಹಲಿಗೆ ತೆರಳಿದ್ದಾರೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ಗೆ ಸಚಿವ ಸ್ಥಾನ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ