/newsfirstlive-kannada/media/post_attachments/wp-content/uploads/2023/11/leelavathi.jpg)
ಬೆಂಗಳೂರು: ಹಿರಿಯ ನಟಿ ಲೀಲಾವತಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಬೆಂಗಳೂರು ಹೊರವಲಯದ ಸೋಲದೇವನಹಳ್ಳಿಯಲ್ಲಿ ನೆಲೆಸಿರುವ ಹಿರಿಯ ನಟಿ ಲೀಲಾವತಿ ಅನಾರೋಗ್ಯದಿಂದಾಗಿ ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ ಲೀಲಾವತಿಯವರ ಆರೋಗ್ಯ ವಿಚಾರಿಸಲು ಸ್ಯಾಂಡಲ್​​ವುಡ್​ ನಟ ಹಾಗೂ ನಟಿಯರು, ಗಣ್ಯರು ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.
/newsfirstlive-kannada/media/post_attachments/wp-content/uploads/2023/11/dboss-1.jpg)
ನಿನ್ನೆಯಷ್ಟೇ ಹಿರಿಯ ನಟಿ ಲೀಲಾವತಿ ಮನೆಗೆ ಸ್ಯಾಂಡಲ್​ವುಡ್​ ನಟ ದರ್ಶನ್​​ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ಜೊತೆಗೆ ಬಹುಭಾಷಾ ನಟ ಅರ್ಜುನ್​ ಸರ್ಜಾ ಕೂಡ ಈ ಹಿಂದೆ ಲೀಲಾವತಿಯವರ ಆರೋಗ್ಯ ವಿಚಾರಿಸಿದ್ದರು. ಇನ್ನು ದಿನ ಕಳೆದಂತೆ ಲೀಲಾವತಿ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಸಮಾಜಮುಖಿ ಕೆಲಸಗಳ ಮೂಲಕ ಜನರ ಮನಸ್ಸಿಗೆ ಇನ್ನೂ ಹತ್ತಿರವಾಗುತ್ತಿರುವ ಹಿರಿಯ ನಟಿ ಲೀಲಾವತಿ ಅವರ ಕನಸಿನ ಆಸ್ಪತ್ರೆ ಇಂದು ಉದ್ಘಾಟನೆ ಆಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಶು ಆಸ್ಪತ್ರೆಯನ್ನು ಉದ್ಘಾಟಿಸಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರ ಆಸೆ ಇದಾಗಿದ್ದು, ಸರ್ಕಾರ ಅದಕ್ಕೆ ಸಮ್ಮತಿ ನೀಡಿದೆ.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಸುಸಜ್ಜಿತ ಪಶು ಆಸ್ಪತ್ರೆಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಾಣ ಮಾಡಿರುವ ಲೀಲಾವತಿ ಮತ್ತು ವಿನೋದ್ ರಾಜ್, ಹಿಂದೆ ಜನರಿಗಾಗಿ ಮತ್ತೊಂದು ಆಸ್ಪತ್ರೆಯನ್ನೂ ನಿರ್ಮಿಸಿದ್ದರು. ಈ ಆಸ್ಪತ್ರೆಯನ್ನೂ ಸರಕಾರವೇ ನೋಡಿಕೊಳ್ಳುತ್ತಿದೆ. ಬೆಂಗಳೂರಿನ ಥಣಿಸಂದ್ರದ ಪಶು ಆಸ್ಪತ್ರೆಯನ್ನು ಸರಕಾರ ಸೋಲದೇವನಹಳ್ಳಿಗೆ ಶಿಪ್ಟ್ ಮಾಡಿ ಆದೇಶ ಪ್ರಕಟಿಸಿದೆ.
/newsfirstlive-kannada/media/post_attachments/wp-content/uploads/2023/11/DKS-7.jpg)
ಹಿರಿಯ ನಟಿ ಲೀಲಾವತಿ ಅವರು ಸರಿ ಸುಮಾರು 600ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರಂತೆ. ಲೀಲಾವತಿಯವರು ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಮಲಯಾಳಂ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಇವರಿಗೆ ಕರ್ನಾಟಕ ಸರಕಾರವು ಡಾ. ರಾಜ್‌ಕುಮಾರ್ ಪ್ರಶಸ್ತಿಯನ್ನು ನೀಡಿದೆ. ಇವರಿಗೆ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿಯನ್ನೂ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us