newsfirstkannada.com

Tirupati: 6 ವರ್ಷದ ಬಾಲಕಿ ಹೊತ್ತೊಯ್ದಿದ್ದ ಚಿರತೆ ಕೊನೆಗೂ ಸೆರೆ.. ಇನ್ನೊಂದು ವ್ಯಾಘ್ರನಿಗಾಗಿ ಹುಡುಕಾಟ

Share :

14-08-2023

    ಚಿರತೆ ಹಿಡಿಯಲು 12ಕ್ಕೂ ಹೆಚ್ಚು ಕ್ಯಾಮೆರಾಗಳ ಅಳವಡಿಕೆ

    ಸತತ ಕಾರ್ಯಾಚರಣೆ ಬಳಿಕ ಕೊನೆಗೂ ಸೆರೆ ಸಿಕ್ಕ ಚಿರತೆ

    ಸಂಜೆ ಮಹತ್ವದ ಸಭೆ ಕೈಗೊಂಡ ಟಿಟಿಡಿ ಮಂಡಳಿ ಅಧ್ಯಕ್ಷ

ತಿರುಪತಿ: 6 ವರ್ಷದ ಬಾಲಕಿಯ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. ಇನ್ನೊಂದು ಚಿರತೆ ಕೂಡ ಅದೇ ಸ್ಥಳದಲ್ಲಿ ಕಾಣಿಸಿದ್ದು ಅದನ್ನು ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಆಂಧ್ರದ ತಿರುಪತಿಯಲ್ಲಿರುವ ವಿಶ್ವವಿಖ್ಯಾತ ತಿರುಮಲ ದೇವಸ್ಥಾನದ ಬಳಿ ಬಾಲಕಿಯನ್ನು ಹೊತ್ತೊಯ್ದಿದ್ದ ಚಿರತೆಯನ್ನು ಸೆರೆ ಹಿಡಿಯಲು ಒಂದು ಡಜನ್​ಗೂ ಹೆಚ್ಚು ಕ್ಯಾಮೆರಾಗಳನ್ನು ಕಾಡಿನಲ್ಲಿ ಅಲ್ಲಲ್ಲಿ ಅಳವಡಿಸಲಾಗಿತ್ತು. ಇವುಗಳಲ್ಲಿ 5 ಸ್ಥಳದಲ್ಲಿ ಚಿರತೆ ಓಡಾಡಿರೋದು ಸೆರೆಯಾಗಿದ್ದರಿಂದ ಅದನ್ನು ಬೇಗ ಹಿಡಿಯಲು ಸಿಬ್ಬಂದಿಗೆ ಸಹಾಯವಾಯಿತು. ಬಳಿಕ ಸೆರೆ ಹಿಡಿಯಲಾದ ಚಿರತೆಯನ್ನು ಬೇರೆ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ಹೇಳಲಾಗಿದೆ.

ಪೋಷಕರು ಮಕ್ಕಳೊಂದಿಗೆ ದೇವಸ್ಥಾನಕ್ಕೆ ಬರುವಾಗ ಹೆಚ್ಚಿನ ಜಾಗ್ರತೆ ವಹಿಸಬೇಕು. 15 ವರ್ಷದೊಳಗಿನ ಮಕ್ಕಳೊಂದಿಗೆ ಪೋಷಕರು ಬರಬೇಕಾದರೆ ಬೆಳಗ್ಗೆ 5 ಗಂಟೆಯಿಂದ ಸಂಜೆ 5 ಗಂಟೆ ಒಳಗೆ ಮಾತ್ರ ದೇವಾಲಯಕ್ಕೆ ಬರಬೇಕು. ಇನ್ನು ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಬೈಕ್​ಗಳನ್ನು ನಿರ್ಬಂಧಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (TTD) ತಿಳಿಸಿದೆ.

ಇದನ್ನು ಓದಿ: ಬಾಲಕಿಯನ್ನು ಹೊತ್ತೊಯ್ದ ಚಿರತೆ​.. ತಿರುಪತಿ ತಿಮ್ಮಪ್ಪನ ಈ ಮಾರ್ಗದಲ್ಲಿ ಮಕ್ಕಳ ಪ್ರವೇಶ ನಿರ್ಬಂಧ

ಟಿಟಿಡಿ ಅಧ್ಯಕ್ಷ ಬಿ.ಕರುಣಾಕರ ರೆಡ್ಡಿ ಅವರು ಸುರಕ್ಷತೆಯ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಸಂಜೆ ಸಭೆ ನಡೆಸಲಿದ್ದಾರೆ. ಈ ವೇಳೆ ಪಾದಚಾರಿ ಮಾರ್ಗಗಳು ಮತ್ತು ಘಾಟ್ ರಸ್ತೆಗಳಲ್ಲಿ ಭಕ್ತರ ಸುರಕ್ಷತೆ ಹೇಗಿರಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಿದ್ದಾರೆ ಎಂದು ಹೇಳಲಾಗ್ತಿದೆ.

ಲಕ್ಷಿತಾ ಎನ್ನುವ 6 ವರ್ಷದ ಬಾಲಕಿ ತನ್ನ ಪೋಷಕರೊಂದಿಗೆ ತಿರುಪತಿ ತಿಮ್ಮಪ್ಪನ ದೇವಾಲಯದ ಮೆಟ್ಟಿಲುಗಳನ್ನು ಹತ್ತುವಾಗ ಚಿರತೆ ದಾಳಿ ಮಾಡಿ ಎಳೆದುಕೊಂಡು ಹೋಗಿ ಕೊಂದು ಹಾಕಿತ್ತು. ಇದು ವೆಂಕಟೇಶ್ವರ ಸ್ವಾಮಿಯ ಭಕ್ತರಲ್ಲಿ ಭಾರೀ ಆತಂಕವನ್ನುಂಟು ಮಾಡಿತ್ತು. ಸದ್ಯ ಆ ಚಿರತೆಯನ್ನು ಸೆರೆ ಹಿಡಿಯಲಾಗಿದ್ದು, ಬೇರೊಂದು ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Tirupati: 6 ವರ್ಷದ ಬಾಲಕಿ ಹೊತ್ತೊಯ್ದಿದ್ದ ಚಿರತೆ ಕೊನೆಗೂ ಸೆರೆ.. ಇನ್ನೊಂದು ವ್ಯಾಘ್ರನಿಗಾಗಿ ಹುಡುಕಾಟ

https://newsfirstlive.com/wp-content/uploads/2023/08/AP_CHEETHA.jpg

Load More