newsfirstkannada.com

VIDEO: ‘ಮತ್ತೆ ನಾವೇ ಅಧಿಕಾರಕ್ಕೆ ಬರೋಣ’- ವಿಪಕ್ಷ ನಾಯಕರಾಗುತ್ತಿದ್ದಂತೆ ಆರ್‌.ಅಶೋಕ್ ಮೊದಲ ಮಾತು

Share :

17-11-2023

  ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರೋಣ-ಅಶೋಕ್ ಸಂಕಲ್ಪ

  ಹಿರಿಯರು, ಕಿರಿಯರು, ಎಲ್ಲರ ವಿಶ್ವಾಸ ಕೋರಿದ ಆರ್​. ಅಶೋಕ್

  ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದ ವಿರೋಧ ಪಕ್ಷದ ನಾಯಕ

ಬೆಂಗಳೂರು: ವಿರೋಧ ಪಕ್ಷದ ನಾಯಕರಾಗಿ ಆರ್​​.ಅಶೋಕ್​​ ಆಯ್ಕೆಯಾಗಿದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಶೋಕ್​​ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ವಿರೋಧ ಪಕ್ಷದ ನಾಯಕ ಪಟ್ಟ ಸಿಕ್ಕ ಬಳಿಕ ಮಾತನಾಡಿದ ಆರ್. ಅಶೋಕ್ ಅವರು ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರ ತರಲು ಶಪಥ ಮಾಡಿದ್ದಾರೆ.

ತಮ್ಮ ಭಾಷಣ ಆರಂಭಿಸುವ ಮೊದಲು ಆರ್.ಅಶೋಕ್ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ​ ಬೊಮ್ಮಾಯಿ ಅವರ ಸಹಕಾರ ಕೋರಿದ್ದಾರೆ. ಬಳಿಕ ಅಟಲ್ ಬಿಹಾರಿ ವಾಜಪೇಯಿ ಅವರ ಮಾತುಗಳನ್ನು ಸ್ಮರಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ನಮಗೆ ಸವಾಲಿದೆ. ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ ಚುನಾವಣೆ ಜೊತೆಗೆ ಲೋಕಸಭಾ ಚುನಾವಣೆ ಇದೆ. ಈಗ್ದಾ ಮೈದಾನದ ಹೋರಾಟದಲ್ಲಿ ಭಾಗಿಯಾಗಿದ್ದೇವೆ. ನನ್ನ ಆಯ್ಕೆಗೆ ಸಹಕರಿಸಿದ ಎಲ್ಲಾ ಶಾಸಕರಿಗೆ ಅಭಿನಂದನೆಗಳು. ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರೋಣ. ಈ ವೇಳೆ 28 ಸ್ಥಾನ ಗೆಲ್ಲುವ ಸಂಕಲ್ಪ ಮಾಡುತ್ತೇನೆ ಎಂದರು.

ಆರ್​ ಅಶೋಕ್ ಅವರು ಹಿರಿಯರು, ಕಿರಿಯರು, ಎಲ್ಲರ ವಿಶ್ವಾಸ ಕೋರಿದ್ದಾರೆ. ಬೆಳಗಾವಿ ಅದಿವೇಶನಕ್ಕೆ ಸಜ್ಜಾಗಿ ಎಂದು ಶಾಸಕರಿಗೆ ಕರೆ ನೀಡಿದ್ದಾರೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಘೋಷಣೆ ಕೂಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ‘ಮತ್ತೆ ನಾವೇ ಅಧಿಕಾರಕ್ಕೆ ಬರೋಣ’- ವಿಪಕ್ಷ ನಾಯಕರಾಗುತ್ತಿದ್ದಂತೆ ಆರ್‌.ಅಶೋಕ್ ಮೊದಲ ಮಾತು

https://newsfirstlive.com/wp-content/uploads/2023/11/R-Ashok-Bjp-1.jpg

Load More