ನಮಗೆ ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಲು ಆಗುತ್ತಿಲ್ಲ
20ಕ್ಕೂ ಹೆಚ್ಚು ಸಚಿವರಿಗೆ ಮನವಿ ಮಾಡಿದರೂ ಸರಿಯಾಗಿ ಸ್ಪಂದಿಸುತ್ತಿಲ್ಲ
ಕೆಲ ಸಚಿವರು ದುರಹಂಕಾರ ತೋರಿಸುತ್ತಿದ್ದಾರೆ ಎಂದ ಕಾಂಗ್ರೆಸ್ ಶಾಸಕರು
ಬೆಂಗಳೂರು: ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ನೆಮ್ಮದಿಯಾಗಿ 5 ವರ್ಷ ರಾಜ್ಯಭಾರ ಮಾಡೋ ಕನಸು ಕಂಡಿತ್ತು. ಆದ್ರೆ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 2 ತಿಂಗಳು ಕಳೆಯುತ್ತಿದ್ದಂತೆ ಶಾಸಕರ ಅಸಮಾಧಾನ ಸ್ಫೋಟಗೊಂಡಿದೆ. ತಮ್ಮ ಸರ್ಕಾರದ ಹಲವು ಸಚಿವರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ದೂರು ಕೊಟ್ಟಿದ್ದಾರೆ. ಪ್ರಮುಖವಾಗಿ ಕೆಲ ಸಚಿವರು ದುರಹಂಕಾರ ತೋರಿಸುತ್ತಿದ್ದಾರೆ. ತಮ್ಮ ಕೆಲಸ ಮಾಡಿಕೊಡ್ತಿಲ್ಲ ಅಂತಾ 30ಕ್ಕೂ ಹೆಚ್ಚು ಶಾಸಕರು ದೂರಿನ ಪತ್ರಕ್ಕೆ ಸಹಿ ಹಾಕಿದ್ದಾರೆ ಎನ್ನಲಾಗಿದೆ.
ಶಾಸಕರ ದೂರಿನ ಪತ್ರದಲ್ಲೇನಿದೆ?
ಅಸಮಾಧಾನಗೊಂಡ ಶಾಸಕರು ನಮಗೆ ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಲು ಆಗುತ್ತಿಲ್ಲ. 20ಕ್ಕೂ ಹೆಚ್ಚು ಸಚಿವರಿಗೆ ತಮ್ಮ ಕ್ಷೇತ್ರಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದರೂ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದಿದ್ದಾರೆ. ಇದಕ್ಕಿಂತಲೂ ಮುಖ್ಯವಾಗಿ ದೂರಿನ ಪತ್ರದಲ್ಲಿ ಶಾಸಕರು, ಸಚಿವರು ಮೂರನೇ ವ್ಯಕ್ತಿಗಳ ಮೂಲಕ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸ್ಥಳೀಯ ಶಾಸಕರು ನಾವಾಗಿದ್ದರೂ ಅನುದಾನಕ್ಕಾಗಿ ಮೂರನೇ ವ್ಯಕ್ತಿಗಳಿಗೆ ಮೊರೆ ಹೋಗಬೇಕಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಸಹಕಾರ ಕೊಡುತ್ತಿಲ್ಲ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: 130ಕ್ಕೂ ಹೆಚ್ಚು ಸ್ಥಾನ ಗೆದ್ದಿರೋ ಸಿದ್ದು ಸರ್ಕಾರವನ್ನೇ ಕೆಡವಲು ಸ್ಕೆಚ್ ಹಾಕಿದ್ರಾ? ಏನಿದು ಡಿಕೆಶಿ ಆರೋಪ?
ಸಚಿವರು ತಮಗೆ ಬೇಕಾದ ಅಧಿಕಾರಿಗಳಿಗೆ ಮಣೆ ಹಾಕಿ ಸ್ವಜನಪಕ್ಷಪಾತ ಮಾಡುತ್ತಿದ್ದಾರೆ. ಯಾವ ಅಧಿಕಾರಿಯೂ ನಮ್ಮ ಶಾಸಕರ ಕೆಲಸ ಮಾಡಿಕೊಡುತ್ತಿಲ್ಲ. ನಮ್ಮ ಮಾತಿಗೆ ಬೆಲೆಯೂ ನೀಡುತ್ತಿಲ್ಲ. ತಾವು ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಬೇಕು. ನಮ್ಮ ವಿಶ್ವಾಸಕ್ಕೆ ಹಕ್ಕುಚ್ಯುತಿ ಬಾರದಂತೆ ತಾವು ನಡೆದುಕೊಳ್ಳುತ್ತಿರೆಂದು ನಂಬುತ್ತೇವೆ ಎಂದು ಶಾಸಕರು ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ