/newsfirstlive-kannada/media/post_attachments/wp-content/uploads/2025/06/Rajat_Patidar_WIN_1.jpg)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೊನೆಗೂ ಪ್ರಶಸ್ತಿ ಬರವನ್ನು ನೀಗಿಸಿಕೊಂಡಿದೆ. ಮೋದಿ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರ್‌ಸಿಬಿ ಕೇವಲ 6 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕಪ್ ಗೆದ್ದ ಹಿನ್ನೆಲೆಯಲ್ಲಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಆರ್‌ಸಿಬಿ ತಂಡದ ಆಟಗಾರರನ್ನು ಸನ್ಮಾನಿಸಲು ಅನುಮತಿ ಕೋರಿ ಪತ್ರ ಬರೆಯಲಾಗಿದೆ.
ಪಂಜಾಬ್ ಕಿಂಗ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಅಮೋಘ ಗೆಲುವು ಪಡೆದಿದೆ. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ತಂಡದ ಆಟಗಾರರಿಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸನ್ಮಾನ ಮಾಡಲು ರಾಜ್ಯ ಸರ್ಕಾರ ಯೋಜಿಸಿದೆ. ಇದಕ್ಕಾಗಿ ಸನ್ಮಾನ ಕಾರ್ಯಕ್ರಮಕ್ಕೆ ಅನುಮತಿ ಕೋರಿ ಆರ್‌ಸಿಬಿ ಫ್ರಾಂಚೈಸಿಗೆ ಹಾಗೂ ಆಟಗಾರರಿಗೆ ಸರ್ಕಾರದ ಸಿಬ್ಬಂದಿ, ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಅವರು ಪತ್ರ ಬರೆದಿದ್ದಾರೆ.
ಇದನ್ನೂ ಓದಿ: 18ಕ್ಕೆ ಟ್ರೋಫಿಗೆ ಮುತ್ತಿಟ್ಟ RCB.. ಫೈನಲ್ ಗೆಲುವಿಗೆ ಕಾರಣ ಹೇಳಿದ ಕ್ಯಾಪ್ಟನ್ ರಜತ್ ಪಾಟಿದಾರ್
ಆರ್‌ಸಿಬಿ ಫ್ರಾಂಚೈಸಿ ಹಾಗೂ ಆಟಗಾರರಿಂದ ಪತ್ರಕ್ಕೆ ಅನುಮತಿ ಸಿಕ್ಕರೇ ಫೈನಲ್ನಲ್ಲಿ ಗೆದ್ದ ಎಲ್ಲ ಆಟಗಾರರಿಗೂ ಸರ್ಕಾರದಿಂದ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸನ್ಮಾನ ಮಾಡಲಾಗುತ್ತದೆ. ಈ ವೇಳೆ ಕಾರ್ಯಕ್ರಮದಲ್ಲಿ ರಾಜಕೀಯದ, ಕ್ರಿಕೆಟ್‌ನ ಗಣ್ಯರು ಭಾಗಿಯಾಗಲಿದ್ದಾರೆ. ಆರ್‌ಸಿಬಿ ಫೈನಲ್ ಗೆಲ್ಲಲಿ ಎಂದು ಸಿಎಂ ಸಿದ್ದರಅಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಎಲ್ಲರೂ ಶುಭ ಹಾರೈಸಿದ್ದರು. ಅದರಂತೆ ಆರ್‌ಸಿಬಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.
ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 190 ರನ್ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಸ್ವೀಕರಿಸಿದ್ದ ಎದುರಾಳಿ ಪಂಜಾಬ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 184 ರನ್‌ಗಳನ್ನು ಮಾತ್ರ ಗಳಿಸಿ 6 ರನ್‌ಗಳಿಂದ ಸೋಲೋಪ್ಪಿಕೊಂಡಿತು.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ