ಪಟಾಕಿ ಕಾರ್ಖಾನೆಯಲ್ಲಿ ಭಾರೀ ಅನಾಹುತ.. ಸ್ಥಳದಲ್ಲೇ ಜೀವ ಬಿಟ್ಟ ನಾಲ್ವರು ಮಹಿಳೆಯರು

author-image
Bheemappa
Updated On
ಪಟಾಕಿ ಕಾರ್ಖಾನೆಯಲ್ಲಿ ಭಾರೀ ಅನಾಹುತ.. ಸ್ಥಳದಲ್ಲೇ ಜೀವ ಬಿಟ್ಟ ನಾಲ್ವರು ಮಹಿಳೆಯರು
Advertisment
  • ಪಟಾಕಿಗಳು ಸಿಡಿಯುತ್ತಿರುವುದು ನೋಡಿ ಜನರು ಓಡಿ ಹೋದರು
  • ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ
  • ಕಾರ್ಖಾನೆಯಲ್ಲಿದ್ದ ನಾಲ್ವರು ಮಹಿಳೆಯರು ಸ್ಥಳದಲ್ಲೇ ಪ್ರಾಣ ಬಿಟ್ರು

ಲಕ್ನೋ: ಪರವಾನಗಿ ಪಡೆದಿರುವ ಪಟಾಕಿ ಕಾರ್ಖಾನೆಯಲ್ಲಿ ಭಯಾನಕ ಸ್ಫೋಟ ಸಂಭವಿಸಿ ನಾಲ್ವರು ಮಹಿಳೆಯರು ಜೀವ ಕಳೆದುಕೊಂಡಿದ್ದಾರೆ. ಇದರ ಜೊತೆಗೆ 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅತ್ರಾಸಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಪಟಾಕಿ ಕಾರ್ಖಾನೆಯಲ್ಲಿ ಮೊದಲು ಬೆಂಕಿ ಹೇಗೆ ಕಾಣಿಸಿಕೊಂಡಿತು ಎನ್ನುವುದ ಬಗ್ಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಪಟಾಕಿಗಳಿಗೆ ಬೆಂಕಿ ತಗುಲಿದ್ದರಿಂದ ಭಾರೀ ಸ್ಫೋಟ ಸಂಭವಿಸಿದ್ದರಿಂದ ಸ್ಥಳದಲ್ಲೇ ನಾಲ್ವರು ಮಹಿಳೆಯರು ಪ್ರಾಣ ಬಿಟ್ಟಿದ್ದಾರೆ. 9 ಮಂದಿ ಗಂಭೀರವಾಗಿದ್ದು ಇದರಲ್ಲಿ ಒಬ್ಬರು ಮಾತ್ರ ಪುರುಷ ಇದ್ದಾನೆ. ಎಲ್ಲರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

publive-image

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ, ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ನಾಲ್ವರ ಮೃತದೇಹಗಳನ್ನು ತೆಗೆದು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. 9 ಜನರನ್ನು ರಕ್ಷಣೆ ಮಾಡಿ ಆ್ಯಂಬುಲೆನ್ಸ್​ ಮೂಲಕ ಆಸ್ಪತ್ರೆಗೆ ಕಳಿಸಿಕೊಟ್ಟಿದ್ದಾರೆ.

ಕಾರ್ಖಾನೆಯಲ್ಲಿ ಪಟಾಕಿಗಳು ಸಿಡಿಯುತ್ತಿದ್ದರೇ ಅದು ಎಷ್ಟು ಪ್ರಬಲವಾಗಿತ್ತೆಂದರೆ ಅವುಗಳು 300 ಮೀಟರ್‌ವರೆಗೆ ಹೋಗಿ ಬಿದ್ದಿವೆ. ಪಟಾಕಿ ಸಿಡಿಯುತ್ತಿರುವುದು ನೋಡಿ ಅಲ್ಲಿದ್ದ ಜನರು ಓಡಿ ಹೋಗಿದ್ದಾರೆ. ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ಪಡೆದಿದ್ದಾರೆ. ಘಟನೆ ಸ್ಥಳಕ್ಕೆ ಭೇಟಿ ನೀಡಿ, ಎಲ್ಲವನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment