/newsfirstlive-kannada/media/post_attachments/wp-content/uploads/2024/06/Pawan-Kalyana-2.jpg)
ಹೈದರಾಬಾದ್: ಆಂಧ್ರಪ್ರದೇಶದ ಡಿಸಿಎಂ ನಟ ಪವನ್ ಕಲ್ಯಾಣ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಡಿಸಿಎಂ ಪವನ್ ಕಲ್ಯಾಣ್ ಅವರ ಕಚೇರಿ ಸಿಬ್ಬಂದಿಗೆ ಕಿಡಿಗೇಡಿಗಳು ಬೆದರಿಕೆ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಆಕ್ಷೇಪಾರ್ಹ ಭಾಷೆಯಲ್ಲಿ ಎಚ್ಚರಿಕೆ ಸಂದೇಶಗಳನ್ನು ಕಳುಹಿಸಿಲಾಗಿದೆ. ಅಷ್ಟೇ ಅಲ್ಲ ಪವನ್ ಕಲ್ಯಾಣ್ ಅವರನ್ನು ಸಾಯಿಸುತ್ತೇವೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬೆದರಿಕೆ ಹಾಕಿದ್ಯಾರು?
ಡಿಸಿಎಂ ಪವನ್ ಕಲ್ಯಾಣ್ ಅವರ ಸೆಲ್ ಎಪಿ ಸೆಕ್ರೆಟರಿಯೇಟ್ 2ನೇ ಬ್ಲಾಕ್‌ನಲ್ಲಿದೆ. ಪವನ್ ಕಲ್ಯಾಣ್ ಅವರನ್ನು ಕೊಲ್ಲುತ್ತೇವೆ, ಅವರ ಪಕ್ಕದಲ್ಲೇ ಇದ್ದೇವೆ ಎಂದು ಬೆದರಿಕೆ ಕರೆಗಳು ಬಂದಿವೆ. ಜತೆಗೆ ಪವನ್ ಅವರಿಗೆ ಅಸಭ್ಯ ಭಾಷೆಯಲ್ಲಿ ನಿಂದಿಸಲಾಗಿದೆ. ಈ ಕೂಡಲೇ ಆತಂಕಕ್ಕೆ ಒಳಗಾದ ಕಚೇರಿ ಸಿಬ್ಬಂದಿ ವಿಷಯವನ್ನು ಪವನ್ ಕಲ್ಯಾಣ್ ಗಮನಕ್ಕೆ ತಂದಿದ್ದಾರೆ.
ಇನ್ನು, ಉನ್ನತ ಪೊಲೀಸ್ ಅಧಿಕಾರಿಗಳು ಬೆದರಿಕೆ ಹಾಕಿದ್ಯಾರು? ಎಂದು ತನಿಖೆ ನಡೆಸುತ್ತಿದ್ದಾರೆ. ಬೆದರಿಕೆ ಕರೆಗಳು ಮತ್ತು ಸಂದೇಶಗಳು ಎಲ್ಲಿಂದ ಬಂದವು ಎಂದು ವಿಚಾರಣೆ ಮಾಡುತ್ತಿದ್ದಾರೆ. ಈ ಹಿಂದೆಯೂ ಇವರಿಗೆ ಬೆದರಿಕೆ ಕರೆಗಳು ಬಂದಿದ್ದವು.
ಇದನ್ನೂ ಓದಿ:ಹೊಸ RBI ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ; ನಾಳೆಗೆ ಶಕ್ತಿಕಾಂತ ದಾಸ್ ಅವಧಿ ಅಂತ್ಯ
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ