ಅಳೆದು ತೂಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ರಾಜ್ಯದಲ್ಲಿ 2 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ
ಕರ್ನಾಟಕದ 17 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ
ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಆಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಸುದ್ದಿಗೋಷ್ಟಿ ನಡೆಸಿ, ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದಾರೆ.
ಯಾರಿಗೆಲ್ಲ ಟಿಕೆಟ್..?
ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಕೆಸಿ ವೇಣುಗೋಪಾಲ್, ಅಂಬಿಕಾ ಸೋನಿ, ಸಲ್ಮಾನ್ ಖುರ್ಷಿದ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಸುದೀರ್ಘ ಚರ್ಚೆಗಳ ಬಳಿಕ ಅಭ್ಯರ್ಥಿಗಳ ಹೆಸರು ಪ್ರಕಟಗೊಂಡಿದೆ.
ರಾಜ್ಯದಲ್ಲಿ ಯಾವಾಗ ಚುನಾವಣೆ..?
ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದ್ರೆ, ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ