newsfirstkannada.com

ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್.. ಗೋವಿಂದ ಕಾರಜೋಳ ವಿರುದ್ಧ FIR

Share :

Published April 2, 2024 at 10:23pm

  ಮೋದಿ ಸರ್ಕಾರದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚು ಅಂತ ಭಾಷಣ

  ಈ ಬಾರಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಕಾರಜೋಳ ಸ್ಪರ್ಧೆ

  ಧಾರ್ಮಿಕ ಕೇಂದ್ರದಲ್ಲಿ ರಾಜಕೀಯ ಭಾಷಣಕ್ಕೆ ಅವಕಾಶ ಇರಲ್ಲ

ಚಿತ್ರದುರ್ಗ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ ದೂರು ದಾಖಲು ಮಾಡಲಾಗಿದೆ.

ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಮಾರ್ಚ್​ 30 ರಂದು ಜಿಲ್ಲೆಯ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಮಠದಲ್ಲಿ‌ ರಾಜಕೀಯ ಭಾಷಣ ಮಾಡಿದ್ದಾರೆ. ಎಲೆಕ್ಷನ್​ ಇರುವುದರಿಂದ ಧಾರ್ಮಿಕ ಕೇಂದ್ರದಲ್ಲಿ ರಾಜಕೀಯ ಭಾಷಣಕ್ಕೆ ಅವಕಾಶ ಇರುವುದಿಲ್ಲ. ಆದರೂ ಕಾರಜೋಳ ಅವರು ಭಾಷಣದಲ್ಲಿ, ಕಾಂಗ್ರೆಸ್ ಜನರ ಮಧ್ಯೆ ವಿಷಬೀಜ ಬಿತ್ತುತ್ತದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚುತ್ತಿದೆ ಎಂದು ಭಾಷಣ ಮಾಡಿದ್ದಾರೆ.

ಸದ್ಯ ಚುನಾವಣಾ ನೀತಿ ಸಂಹಿತೆ ಜಾರಿ ಇದ್ದರೂ ರಾಜಕೀಯ ಭಾಷಣ ಮಾಡಿದ್ದಾರೆ ಎಂದು ಈ ಕುರಿತು ಎಫ್ಎಸ್ಟಿ ಅಧಿಕಾರಿ ಗಿರೀಶ್ ಎಂಬುವರು ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಇವರ ದೂರಿನ ಆಧಾರದ ಮೇಲೆ ನಾಯಕನಹಟ್ಟಿ ಪೊಲೀಸರು ಎಫ್ಐಆರ್ ಅನ್ನು ದಾಖಲಿಸಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್.. ಗೋವಿಂದ ಕಾರಜೋಳ ವಿರುದ್ಧ FIR

https://newsfirstlive.com/wp-content/uploads/2024/04/GOVINDA_KARAJOLA.jpg

Load More