ಮರಾಠ ಸಮುದಾಯದ ಅಭ್ಯರ್ಥಿಯನ್ನ ಕಣಕ್ಕೆ ಇಳಿಸಿದ ಕಾಂಗ್ರೆಸ್
ಈ ಹಿಂದೆ ಅನಂತ್ ಕುಮಾರ್ ಹೆಗಡೆ ಸೋಲಿಸಿದ್ದ ಮಹಿಳಾ ಅಭ್ಯರ್ಥಿ
ಬಿಜೆಪಿಗೆ ಟಕ್ಕರ್ ಕೊಡಲು ಮರಾಠ ಸಮುದಾಯ ಅಭ್ಯರ್ಥಿಗೆ ಟಿಕೆಟ್
ಉತ್ತರ ಕನ್ನಡ: ಬಿಜೆಪಿಯ ಭದ್ರಕೋಟೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರವನ್ನು ಈ ಬಾರಿಯಾದರೂ ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ರೂಪಿಸಿದೆ. ಯೋಜನೆಯಂತೆ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.
ಮರಾಠರೇ ಅಧಿಕ ಸಂಖ್ಯೆಯಲ್ಲಿರುವ ಕಿತ್ತೂರು, ಖಾನಾಪುರ ಭಾಗದಲ್ಲೇ ಕಾಂಗ್ರೆಸ್ಗೆ ಪ್ರತಿ ಬಾರಿ ಹಿನ್ನಡೆ ಆಗುತ್ತಿತ್ತು. ಈ ಸಲ ಎಲ್ಲವನ್ನು ಗಣನೆಗೆ ತೆಗೆದುಕೊಂಡು ಕಾಂಗ್ರೆಸ್ ಮರಾಠ ಸಮುದಾಯದ ಅಭ್ಯರ್ಥಿಯಾದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ಗೆ ಟಿಕೆಟ್ ಘೋಷಣೆ ಮಾಡಿ ದಾಳ ಉರುಳಿಸಿದೆ. ಕ್ಷೇತ್ರದಲ್ಲಿ ಮರಾಠ ಸಮುದಾಯದ ಮತದಾರರೇ ಅಧಿಕ ಸಂಖ್ಯೆಯಲ್ಲಿದ್ದರಿಂದ ಕಿತ್ತೂರು, ಖಾನಾಪುರ ಭಾಗದಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗುತ್ತಿತ್ತು. ಇದನ್ನು ಮನಗಂಡಿರುವ ಕಾಂಗ್ರೆಸ್ ನಾಯಕರು ಬಿಜೆಪಿಗೆ ಟಕ್ಕರ್ ಕೊಡಲು ಮಹಿಳಾ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಈ ಕಿತ್ತೂರು, ಖಾನಾಪುರ ಎರಡು ಬೆಳಗಾವಿ ಜಿಲ್ಲೆಗೆ ಬಂದರೂ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ. ಬಿಜೆಪಿಯ ಈ ಬಾರಿ ಮತಗಳ ಹಿನ್ನಡೆ ತಡೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ. ಇದೇ ಕ್ಷೇತ್ರದಿಂದ ಅನಂತ್ ಕುಮಾರ್ ಹೆಗಡೆ ಆರು ಬಾರಿ ಗೆಲುವು ಪಡೆದಿದ್ದರು. ಈ ಹಿಂದೆ ಒಮ್ಮೆ ಮಾರ್ಗರೇಟ್ ಆಳ್ವಾ ಅವರಿಂದ ಹೆಗಡೆ ಸೋತಿದ್ದರು. ಈಗ ಡಾ. ಅಂಜಲಿ ನಿಂಬಾಳ್ಕರ್ ಅಭ್ಯರ್ಥಿಯಾಗಿದ್ದು ಕ್ಷೇತ್ರದಲ್ಲಿ ಯಾವ ರೀತಿ ಪ್ರಚಾರ ಕಾರ್ಯ ಕೈಗೊಂಡು ಗೆಲುವು ಪಡೆಯುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ