newsfirstkannada.com

ಇವತ್ತು ಸಮಲತಾ ಅಂಬರೀಶ್​​ರಿಂದ ಮಹತ್ವದ ನಿರ್ಧಾರ; ಸಭೆಯಲ್ಲಿ ದರ್ಶನ್ ಅವರೇ ಹೈಲೈಟ್ಸ್​..!

Share :

Published April 3, 2024 at 8:57am

Update April 3, 2024 at 9:00am

    ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡ್ತಾರಾ ಸುಮಲತಾ ಅಂಬರೀಶ್?

    ಮೈತ್ರಿ ಧರ್ಮ ಪಾಲನೆಗೆ ಗ್ರೀನ್ ಸಿಗ್ನಲ್ ನೀಡ್ತಾರಾ ಹಾಲಿ ಸಂಸದೆ?

    ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಇಂದು ಅಂತಿಮ ನಿರ್ಧಾರ

ಮಂಡ್ಯ: ಇವತ್ತು ಸಂಸದ ಸುಮಲತಾ ಅಂಬರೀಶ್ ಮಹತ್ವದ ಸಭೆ ನಡೆಸಲಿದ್ದು, ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಅಧಿಕೃತ ಘೋಷಣೆೆ ಮಾಡಲಿದ್ದಾರೆ. ಈ ಸಭೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಭಾಗಿಯಾಗಲಿದ್ದಾರೆ.

ಬೆಳಗ್ಗೆ 10.30ಕ್ಕೆ ಮಂಡ್ಯದ ಕಾಳಿಕಾಂಭ ಸಮುದಾಯ ಭವನದಲ್ಲಿ ಸಂಸದೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ನಟ ದರ್ಶನ್, ಪುತ್ರ ಅಭಿಷೇಕ್ ಅಂಬರೀಶ್, ಹಿರಿಯ ನಟ ದೊಡ್ಡಣ್ಣ, ನಿರ್ಮಾಪಕ ರಾಕ್‌ಲೈನ್ ಭಾಗಿಯಾಗಲಿದ್ದಾರೆ. ತಮ್ಮ ಸಂಸದ ಸ್ಥಾನ ಅವಧಿಯ ಸಾಧನೆ ಬಗ್ಗೆ ಸಾಕ್ಷ್ಯಚಿತ್ರವನ್ನ ಬಿಡುಗಡೆ ಮಾಡಲಿದ್ದಾರೆ. ನಟ ದರ್ಶನ್‌ರಿಂದ ಬಿಡುಗಡೆ ಮಾಡಿಸಲು ಪ್ಲಾನ್ ಮಾಡಿದ್ದಾರೆ. ಸಭೆಯ ನಂತ್ರ ಸುಮಲತಾ ಅಂಬರೀಶ್ ಮೈತ್ರಿ ಧರ್ಮವನ್ನ ಪಾಲನೆ ಮಾಡ್ತಾರಾ? ಇಲ್ವಾ ಪಕ್ಷೇತರವಾಗಿ ಸ್ಪರ್ಧೆ ಮಾಡ್ತಾರಾ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ: 16 ಅಂತಸ್ತಿನ ಕಟ್ಟಡದಲ್ಲಿ ಘೋರ ಬೆಂಕಿ ದುರಂತ; 29 ಮಂದಿ ಸಜೀವ ದಹನ

ನಿನ್ನೆ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವ ಸುಮಲತಾ, ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ,
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.

ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ.

ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ.

ಇದನ್ನೂ ಓದಿ:ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ಬಾಂಬ್ ಬಾಣ; ಬರದ ಅಸ್ತ್ರ ಪ್ರಯೋಗಿಸಿ ಕೌಂಟರ್ ಕೊಟ್ಟ ಸಿದ್ದರಾಮಯ್ಯ..!

ಏಪ್ರಿಲ್ 3ರ ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ಅಂದು ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ.
ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇವತ್ತು ಸಮಲತಾ ಅಂಬರೀಶ್​​ರಿಂದ ಮಹತ್ವದ ನಿರ್ಧಾರ; ಸಭೆಯಲ್ಲಿ ದರ್ಶನ್ ಅವರೇ ಹೈಲೈಟ್ಸ್​..!

https://newsfirstlive.com/wp-content/uploads/2024/04/SUMALATHA-3.jpg

Load More