ಕಾಫಿನಾಡಲ್ಲಿ ಭ್ರಷ್ಟರಿಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು
ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಗಂಗಾಧರ್
ಏಕಕಾಲಕ್ಕೆ 50ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳ ರೇಡ್
ಚಿಕ್ಕಮಗಳೂರು: ಇವತ್ತು ಬೆಳ್ಳಂಬೆಳಗ್ಗೆ ಕಾಫಿನಾಡಿನ ಹಲವಡೆ ಏಕಕಾಲಕ್ಕೆ 50ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಸಂಪಾದನೆಯ ದೂರಿನ ಮೇಲೆ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಗಂಗಾಧರ್ ಮನೆ ಮೇಲೆ ರೇಡ್ ಆಗಿದೆ. ಜಯನಗರ ಬಡಾವಣೆಯಲ್ಲಿರುವ ಮನೆ, ರಾಮನಹಳ್ಳಿಯಲ್ಲಿರುವ ಪೆಟ್ರೋಲ್ ಬಂಕ್, ನಿರ್ಮಾಣ ಹಂತದ ರೆಸಾರ್ಟ್ ಮೇಲೆ ದಾಳಿ ಮಾಡಲಾಗಿದೆ.
ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ದಾಳಿ ವೇಳೆ ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ಅಧಿಕಾರಿ ಗಂಗಾಧರ್ ಅವರಿಗೆ ಸೇರಿದ್ದು ಎನ್ನಲಾದ 3 ಕೋಟಿ 76 ಲಕ್ಷದ ಅಕ್ರಮ ಆಸ್ತಿ ಪತ್ತೆಯಾಗಿದೆ.
ಚಿಕ್ಕಮಗಳೂರು ನಗರದಲ್ಲಿ 16 ಸೈಟ್, ಅಲ್ಲಂಪುರ ಗ್ರಾಮದ ಬಳಿ 1 ರೆಸಾರ್ಟ್, ಪತ್ನಿ ಹೆಸರಲ್ಲಿ ಒಂದು ಪೆಟ್ರೋಲ್ ಬಂಕ್, ಚಿಕ್ಕಮಗಳೂರು ನಗರದ ಅರವಿಂದ ನಗರ ಹಾಗೂ ಜಯನಗರದಲ್ಲಿ 2 ಮನೆ ಇರೋದು ಪತ್ತೆಯಾಗಿದೆ. ಗಂಗಾಧರ್ ಅವರಿಗೆ ಸೇರಿದ್ದು ಎನ್ನಲಾದ 3 ಕೋಟಿ 76 ಲಕ್ಷದ ಅಕ್ರಮ ಆಸ್ತಿ ಪತ್ತೆಯಾಗಿದ್ದು, ಚಿನ್ನ-ಬೆಳ್ಳಿ ಬಗ್ಗೆ ಮತ್ತೊಂದು ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ