/newsfirstlive-kannada/media/post_attachments/wp-content/uploads/2025/07/LOKA-RAID-1.jpg)
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ.. ಬೆಂಗಳೂರಿನಲ್ಲಿ ಮೂವರು IAS ಅಧಿಕಾರಿ ಮನೆ ಮೇಲೆ ದಾಳಿ ನಡೆಸಿರೋ ಲೋಕಾಯುಕ್ತ ಅಧಿಕಾರಿಗಳು ಹಲವು ದಾಖಲೆಗಳನ್ನ ಪರಿಶೀಲನೆ ನಡೆಸ್ತಿದ್ದಾರೆ.
IAS ಅಧಿಕಾರಿಗಳಾದ ವಾಸಂತಿ ಅಮರ್, ಟೌನ್ ಪ್ಲ್ಯಾನಿಂಗ್ ಸಹಾಯಕ ನಿರ್ದೇಶಕ ಬಾಗ್ಲಿ ಮಾರುತಿ, ಮತ್ತು ಬಿಬಿಎಂಪಿ ಕಾರ್ಯ ನಿರ್ವಾಹಕ ಎರ್ರಪ್ಪ ರೆಡ್ಡಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ಹಿಂದೆ ಈ ಮೂವರು ಅಧಿಕಾರಿಗಳ ವಿರುದ್ಧ ಸರ್ಕಾರಿ ಜಮೀನು ಅಕ್ರಮವಾಗಿ ಬೇರೆಯವರ ಹೆಸರಿಗೆ ವರ್ಗಾಣೆ ಮಾಡಿರೋ ಆರೋಪ ಕೇಳಿ ಬಂದಿತ್ತು. ಅದರಂತೆ ಇವತ್ತು ಎಸ್ಪಿ ವಂಶಿಕೃಷ್ಣ ನೇತೃತ್ವದ ಟೀಂ ದಾಳಿ ನಡೆಸಿ ಪರಿಶೀಲನೆ ನಡೆಸ್ತಿದ್ದಾರೆ.
ಇದನ್ನೂ ಓದಿ: ಕ್ರೀಡಾಪಟುಗಳಿಗೆ ಗುಡ್ನ್ಯೂಸ್; ಚಿನ್ನ, ಬೆಳ್ಳಿ, ಕಂಚಿನ ಪದಕ ಗೆದ್ದರೆ ಕೋಟಿ ಕೋಟಿ ಹಣ.. ಸರ್ಕಾರಿ ಉದ್ಯೋಗ
ಟೌನ್ ಪ್ಲಾನಿಂಗ್ ಬಗ್ಲಿ ಮಾರುತಿ ನಿವಾಸದಲ್ಲಿ ಅಪಾರ ಪ್ರಮಾಣದಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ದುಬಾರಿ ಬೆಲೆಯ ವಾಚ್ಗಳು, ಕೋಟಿ ಬೆಲೆಬಾಳುವ ಬಂಗಾರ, ಲಕ್ಷಾಂತರ ಮೌಲ್ಯದ ಬೆಳ್ಳಿ ವಸ್ತುಗಳು, ನಗದು ಹಣವನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
[caption id="attachment_132102" align="aligncenter" width="800"] ಬಗ್ಲಿ ಮಾರುತಿ ನಿವಾಸದಲ್ಲಿ ಪತ್ತೆಯಾದ ಚಿನ್ನಾಭರಣ[/caption]
ಬೀದರ್ನಲ್ಲೂ ದಾಳಿ
ಬೀದರ್‌ನ ಜೈಲ್ ಕಾಲೋನಿಯ ಎಸ್‌ಬಿಪಿ ನಗರದ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಸುನೀಲ್ ಕುಮಾರ್ ಪ್ರಭಾ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇವರು ಕಲಬುರಗಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜನಿಯರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಸುನೀಲ್ ಕುಮಾರ್ ವಿರುದ್ದ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಲೋಕಾಯುಕ್ತ ಡಿವೈಎಸ್‌ಪಿ ಹನುಮಂತರಾಯ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಲಬುಗಿಯ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸ್ತಿದ್ದಾರೆ. ಜೊತೆಗೆ ಬೀದರ್‌ನ ಜೈಲ್ ಕಾಲೋನಿಯ ಎಸ್‌ಬಿಪಿ ನಗರದ ನಿವಾಸದ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಮತ್ತೆ ಭಾರೀ ಮಳೆ.. ಈ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ವಿಜಯನಗರದಲ್ಲೂ ಲೋಕ ದಾಳಿ
ವಿಜಯನಗರದಲ್ಲೂ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಭೇಟೆಯಾಡಿದ್ದಾರೆ. ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಮ ಪಂಚಾಯತ್ ಅಧ್ಯಕ್ಷೆ ರಜನಿ ಷಣ್ಮುಖಗೌಡ ಮನೆ ಮೇಲೆ ದಾಳಿ ನಡೆಸಿರೋ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.. ಈ ಹಿಂದೆ ರಜನಿ ಷಣ್ಮುಖುಗೌಡ ಅವರ ಅಳಿಯ ಮಾರುತಿ ಬೆಂಗಳೂರು BBMPಯ ADಯಾಗಿ ಕೆಲಸ ನಿರ್ವಹಿಸುತ್ತಿದ್ದು, ಇವರ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು.. ಈ ಹಿನ್ನೆಲೆ ಅತ್ತೆಯಾಗಿರೋ ರಜನಿ ಷಣ್ಮುಖುಗೌಡ ಅವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲು ರೈತನ ಮಗ ಸಜ್ಜು.. ಇಂದು ಅವಕಾಶ ಸಿಕ್ರೆ ಪರಿಶ್ರಮಕ್ಕೆ ಸಿಕ್ಕ ಬೆಲೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ