newsfirstkannada.com

ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ

Share :

31-05-2023

    ಅಧಿಕ ಆಸ್ತಿ ಗಳಿಸಿರುವ ಆರೋಪ- ಲೋಕಾಯುಕ್ತ ದಾಳಿ

    ಎರಡು ಕಡೆಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು

    ಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ ಸೌಂಡ್​

ಬೆಂಗಳೂರು: ಬೆಳ್ಳಂ ಬೆಳಗ್ಗೆ ಎರಡು ಕಡೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಬೆಸ್ಕಾಂ ಡೈರೆಕ್ಟರ್ ಟೆಕ್ನಿಕಲ್ ಹುದ್ದೆಯಲ್ಲಿರುವ ರಮೇಶ್​​ ಎಂಬವರ ಮನೆ ಮೇಲೆ ಮತ್ತು ಇಂಡಸ್ಟ್ರೀಸ್ ಆಂಡ್ ಬಾಯ್ಲರ್ ಇಲಾಖೆ ಅಧಿಕಾರಿ ಟಿ ವಿ ನಾರಾಯಣಪ್ಪ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಧಿಕಾರಿಗಳು ರಮೇಶ್​ ಎಂಬವರ ಬಸವೇಶ್ವರನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ್ದಾರೆ. ಅತ್ತ ಟಿ ವಿ ನಾರಾಯಣಪ್ಪ ಅವರ ವಿಜಯನಗರ ಮಾರುತಿ ಮಂದಿರ ಬಳಿಯಿರುವ ಮನೆ ಮೇಲೆ ದಾಳಿ ಮಾಡಿದ್ದಾರೆ. ಅಧಿಕಾರಿಗಳು ಎರಡು ಕಡೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದ್ದಾರೆ

ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇಲೆ ದಾಳಿ ಮಾಡಿದ್ದು, ಆದಾಯದ ಮೂಲ, ಆಸ್ತಿ ಪತ್ರಗಳು, ಬ್ಯಾಂಕ್ ವಿವರಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ

https://newsfirstlive.com/wp-content/uploads/2023/05/Lokayukt-Raid.webp

Load More