newsfirstkannada.com

ಇಂದಿನಿಂದ ಅಂಚೆ ಮತದಾನ ಪ್ರಾರಂಭ.. ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ

Share :

Published April 13, 2024 at 7:06am

    ಇಂದಿನಿಂದ ಮನೆಯಿಂದಲೇ ಕುಳಿತು ಮತದಾನ ಮಾಡುವ ಸೌಲಭ್ಯ

    ಮತದಾರರ ಮನೆಗೆ ಬರ್ತಾರೆ ಅಧಿಕಾರಿಗಳು, ವೀಡಿಯೋಗ್ರಾಫರ್ ತಂಡ

    85 ವರ್ಷ ಮೇಲ್ಪಟ್ಟ 6206 ಮಂದಿ ಇಂದು ಮತದಾನ ಮಾಡಲಿದ್ದಾರೆ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ.

ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಕ್ಷೇತ್ರದ ಮತದಾರರಿಗೆ ಅವಕಾಶ ಮಾಡಿಕೊಡಲಾಗಿದೆ. ಮನೆಯಿಂದಲೇ ಕುಳಿತು ಅಂಚೆ ಮತದಾನ ಮಾಡುವ ಸೌಲಭ್ಯ ಒದಗಿಸಲಾಗಿವೆ.

ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ 95,128 ಮಂದಿ ಇದ್ದಾರೆ. ಇನ್ನು 22 ಸಾವಿರದ 222 ಮಂದಿ ವಿಶೇಷ ಚೇತನರಿದ್ದಾರೆ. ಅದರಲ್ಲಿ 85 ವರ್ಷ ಮೇಲ್ಪಟ್ಟ 6206 ಮಂದಿ ಮತ್ತು 201 ವಿಶೇಷ ಚೇತನರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಗ್ಯಾಸ್ಟ್ರಿಕ್ ಎಂದು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಸಾವು.. ವೈದ್ಯರ ನಿರ್ಲಕ್ಷ ಎಂದು ಆರೋಪಿಸಿದ ಕುಟುಂಬಸ್ಥರು

ಅಂಚೆ ಮತದಾನ ಪ್ರಕ್ರಿಯೆ ಹೇಗೆ ನಡೆಯುತ್ತದೆ?

-ನೋಂದಣಿ ಮಾಡಿಕೊಂಡ ಮತದಾರರ ಮನೆಗೆ ಮತಗಟ್ಟೆ ಅಧಿಕಾರಿಗಳ ತಂಡ ಭೇಟಿ ನೀಡುತ್ತಾರೆ
-ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವೀಡಿಯೋಗ್ರಾಫರ್ ತಂಡ ಭೇಟಿ ನೀಡುತ್ತಾರೆ
-ಪೊಲೀಸ್ ಸಿಬ್ಬಂದಿ ಹಾಗೂ ಒಬ್ಬ ಒಬ್ಸರ್ವರ್ ಕಡ್ಡಾಯ ಇರಬೇಕು
-ತಂಡವು ಮನೆಗೆ ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲನೆ ಮಾಡಬೇಕು
-ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ನೀಡಬೇಕು
-ಈ ಎಲ್ಲಾ ಪ್ರಕ್ರಿಯೆ ವೀಡಿಯೋಗ್ರಾಫಿ ಮೂಲಕ ಕಡ್ಡಾಯ ಸೆರೆಯಾಗುತ್ತದೆ
-ಪ್ರತೀ ಮತದಾರರ ಮನೆಗೆ ಎರಡು ಬಾರಿ ಭೇಟಿ ನೀಡಲಿರುವ ಟೀಂ
-ಎರಡು ಬಾರಿಯೂ ಮತದಾನ ಪ್ರಕ್ರಿಯೆ ನಡೆಯದೇ ಇದ್ರೆ ಮತ್ತೆ ಮತದಾನ ನಡೆಸಲು ಅವಕಾಶವಿಲ್ಲ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಂದಿನಿಂದ ಅಂಚೆ ಮತದಾನ ಪ್ರಾರಂಭ.. ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ

https://newsfirstlive.com/wp-content/uploads/2024/04/Vote.jpg

Load More