ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆಯ ಮೇಲೆ ಲೋಕಾಯುಕ್ತ ರೇಡ್
ಚಿತ್ರದುರ್ಗ, ದಾವಣಗೆರೆ ಸೇರಿ ವಿವಿಧೆಡೆ ಲೋಕಾಯುಕ್ತ ದಾಳಿ
ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜನೀಯರ್ ಕೆ. ಮಹೇಶ್
ಚಿತ್ರದುರ್ಗ: ರಾಜ್ಯದ ಹಲವು ಭಾಗಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.
ಇನ್ನು, ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜನೀಯರ್ ಕೆ.ಮಹೇಶ್ ನಿವಾಸದಲ್ಲಿ 15 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಕೆ.ಮಹೇಶ್ ಹಾಗೂ ಅವರ ಪತ್ನಿ ಕೆ. ಭಾರತಿ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯಲ್ಲಿ 15 ಲಕ್ಷ ರೂಪಾಯಿ ನಗದು ಹಾಗೂ ಅರ್ಧ ಕೆಜಿ ಚಿನ್ನಾಭರಣ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆಯಾಗಿ ಕೆ.ಭಾರತಿ ಕೆಲಸ ಮಾಡಿದ್ದರು. ಇದೀಗ ಬಿಬಿಎಂಪಿ AE ಆಗಿ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳು ತಮ್ಮ ದಾಳಿಯನ್ನು ಮುಂದುವರಿಸಿದ್ದು, ವಿವಿಧ ದಾಖಲೆಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ. ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾವ್ ನೇತೃತ್ವದಲ್ಲಿ ದಾಳಿ ನಡೆದಿದೆ. ಕೊಡಗು, ಧಾರವಾಡ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ರಾಜ್ಯದ 18 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಶೋಧಕಾರ್ಯ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ