ಟಿಪ್ಪರ್ ಲಾರಿ ಹರಿದು ಸ್ಥಳದಲ್ಲೇ ಪುಟ್ಟ ಬಾಲಕಿ ಮೃತ್ಯು
ಹಳೆಯ ಕುಂದುವಾಡದಲ್ಲಿ ನಡೆಯಿತು ಭೀಕರ ಅಪಘಾತ
ಸ್ಥಳದಲ್ಲಿ ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ದಾವಣಗೆರೆ: ಟಿಪ್ಪರ್ ಲಾರಿ ಹರಿದು ಪುಟ್ಟ ಬಾಲಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ಹಳೆಯ ಕುಂದುವಾಡದಲ್ಲಿ ನಡೆದಿದೆ. ಚರಸ್ವಿ (02) ಮೃತ ಬಾಲಕಿ.
ಮೃತ ಬಾಲಕಿಯು ಅಂಗನವಾಡಿಯಿಂದ ತನ್ನ ಅಜ್ಜಿಯ ಜೊತೆ ಮನೆಗೆ ಹೋಗುತ್ತಿದ್ದಾಗ ಲಾರಿ ಏಕಾಏಕಿ ಆಕೆಯ ಮೇಲೆ ಹರಿದು ಹೋಗಿದೆ. ಪರಿಣಾಮ ಪುಟ್ಟ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ವಿಚಾರ ಪೋಷಕರಿಗೆ ತಿಳಿಯುತ್ತಿದ್ದಂತೆ ಅವರ ಆಕ್ರಂದನ ಮುಗಿಲು ಮುಟ್ಟಿದೆ.
ಇನ್ನು, 2 ವರ್ಷದ ಬಾಲಕಿಗೆ ಡಿಕ್ಕಿ ಹೊಡೆದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ