ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಶಾಲಾ ಕಾಂಪೌಂಡ್ಗೆ ಡಿಕ್ಕಿ
ಲಾರಿ ಕಾಂಪೌಂಡ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಮುರಿದು ಬಿದ್ದ ವಿದ್ಯುತ್ ಕಂಬ
ಅದೃಷ್ಟವಶಾತ್ ತಪ್ಪಿದ ಅನಾಹುತ, ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರು
ಗದಗ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಕಾಂಪೌಂಡ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಖಾಸಗಿ ಶಾಲೆ ಬಳಿ ಸಂಭವಿಸಿದೆ.
ಲಿಟಲ್ ಹಾರ್ಟ್ಸ್ ಶಾಲೆಯ ಕಾಂಪೌಂಡ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಲ್ಲೇ ಇದ್ದ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಅದೃಷ್ಟವಶಾತ್ ಶಾಲಾ ಮಕ್ಕಳಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಲಾರಿಯಲ್ಲಿ ಅಕ್ರಮ ಮರಳು ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಲಕ್ಷ್ಮೇಶ್ವರ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ