newsfirstkannada.com

ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ಓರ್ವ ಮಹಿಳೆ ಸಾವು, ಮೂವರ ಸ್ಥಿತಿ ಗಂಭೀರ

Share :

12-09-2023

    ಬೆಟ್ಟದ ತಿರುವಿನಲ್ಲಿ ಕ್ಯಾಂಟರ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯ

    ಬಸವೇಶ್ವರನ ದರ್ಶನ ಪಡೆದು ವಾಪಸ್ ಆಗುವಾಗ ಸಂಭವಿಸಿದ ದುರಂತ

    ಭೀಕರ ಅಪಘಾತದಲ್ಲಿ ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರೋ ಘಟನೆ ಮಳವಳ್ಳಿ ತಾಲೂಕಿನ ಬಸವನ ಬೆಟ್ಟದ ಬಳಿ ನಡೆದಿದೆ. ಮಂಗಳಮ್ಮ (50) ಮೃತ ಮಹಿಳೆ.

ತಮ್ಮಡಹಳ್ಳಿ ಗ್ರಾಮದಿಂದ ದೇವರ ಕಾರ್ಯದ ಹಿನ್ನಲೆ ಬಸವನ ಬೆಟ್ಟಕ್ಕೆ ಹೋಗಿ ವಾಪಸ್​​ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಟ್ಟದ ತಿರುವಿನಲ್ಲಿ ಕ್ಯಾಂಟರ್ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಗಂಭೀರವಾಗಿ ಗಾಯಗೊಂಡ ಮೂವರನ್ನು ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ  

ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ಓರ್ವ ಮಹಿಳೆ ಸಾವು, ಮೂವರ ಸ್ಥಿತಿ ಗಂಭೀರ

https://newsfirstlive.com/wp-content/uploads/2023/09/accident-13.jpg

Load More