ಒಂದೇ ಬೈಕ್ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ಪ್ರಯಾಣ!
ದುಧನಿಯಿಂದ ಅಫಜಲಪುರ ಕಡೆಗೆ ಬರುತ್ತಿದ್ದ ವೇಳೆ ಭೀಕರ ಅಪಘಾತ
ಸ್ಥಳಕ್ಕೆ ಅಫಜಲಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ
ಕಲಬುರಗಿ: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರೋ ದಾರುಣ ಘಟನೆ ಅಫಜಲಪುರ-ಹಳ್ಳೋಳ್ಳಿ ಕ್ರಾಸ್ ಬಳಿ ನಡೆದಿದೆ.
ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಪುಟ್ಟ ಪುಟ್ಟ ಮಕ್ಕಳೊಂದಿಗೆ ಬೈಕ್ನಲ್ಲಿ ಐವರು ಪ್ರಯಾಣ ಮಾಡುತ್ತಿದ್ದರು. ಇದೇ ವೇಳೆ ದುಧನಿಯಿಂದ ಅಫಜಲಪುರ ಕಡೆಗೆ ಬರುತ್ತಿದ್ದ ಬೈಕ್ಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ.
ಇದನ್ನು ಓದಿ: ನಟ ದರ್ಶನ್ ಅಭಿಮಾನಿಗಳಿಗೆ ಗುಡ್ನ್ಯೂಸ್; 57ನೇ ಸಿನಿಮಾದ ಮುಹೂರ್ತದ ಜೊತೆ ಟೈಟಲ್ ರಿವೀಲ್!?
ಕೂಡಲೇ ಘಟನಾ ಸ್ಥಳಕ್ಕೆ ಅಫಜಲಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟ ದುರ್ದೈವಿಗಳು ಅಫಜಲಪುರದಲ್ಲಿ ಫಾಸ್ಟ್ ಫುಡ್ ಮಾರಾಟ ಮಾಡುವ ಹೋಟೆಲ್ ನಡೆಸುತ್ತಿದ್ದರು. ನೇಪಾಳ ಮೂಲದ ಈ ಕುಟುಂಬ ಕಳೆದ ಹಲವು ವರ್ಷಗಳಿಂದ ಅಫಜಲಪುರದಲ್ಲಿ ವಾಸವಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ