/newsfirstlive-kannada/media/post_attachments/wp-content/uploads/2025/06/accident17.jpg)
ಮೈಸೂರು: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಜೀವಬಿಟ್ಟಿರೋ ಘಟನೆ ನಂಜನಗೂಡು ತಾಲೂಕಿನ ಸಂಗಮ ಮತ್ತು ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಹಂಚೀಪುರ ಗ್ರಾಮದ ಚಿಕ್ಕ ಸ್ವಾಮಿ (45) ಪತ್ನಿ ರೂಪ (38), ಕಣೇನೂರು ಗ್ರಾಮದ ಚನ್ನಮಲ್ಲಮ್ಮ (55) ಮೃತ ದುರ್ದೈವಿಗಳು.
ಇದನ್ನೂ ಓದಿ:ಬಿ.ದಯಾನಂದ್ ತಲೆದಂಡ ಬೆನ್ನಲ್ಲೇ ಹೊಸ ಆಯುಕ್ತರ ನೇಮಕ.. ನೂತನ ಪೊಲೀಸ್ ಕಮಿಷನರ್ ಇವರೇ..!
ಚಿಕ್ಕಸ್ವಾಮಿ, ಪತ್ನಿ ರೂಪ ಮತ್ತು ಚನ್ನಮಲ್ಲಮ್ಮ ಮೂವರು ಬೈಕ್ನಲ್ಲಿ ಹೋಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ, ಇಬ್ಬರು ಮಹಿಳೆಯರ ಮೇಲೆ ಲಾರಿ ಹರಿದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.
ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಘು, ಪಿಎಸ್ಐ ಚೇತನ್ ಕುಮಾರ್, ಅಪರಾಧ ವಿಭಾಗದ ರಸೂಲ್ ಪಾಗವಾಲೆ, ಎಸ್ ಐ ಶಿವಣ್ಣ, ದೊಡ್ಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ತಮಿಳುನಾಡು ಮೂಲದ ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ