ಅಪಘಾತದಲ್ಲಿ ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕ ಸಾವು
ಹೆದ್ದಾರಿ ಬದಿಯಲ್ಲಿ ಕಾರ್ ನಿಲ್ಲಿಸಿ ಟೈಯರ್ ಬದಲಿಸುತ್ತಿದ್ದ ವೇಳೆ ದುರಂತ
ಇಬ್ಬರ ಮೃತದೇಹಗಳು ತುಮಕೂರು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನೆ
ತುಮಕೂರು: ನಿಂತಿದ್ದ ಕ್ರೂಸರ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರೋ ಘಟನೆ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಕ್ರೂಸರ್ ಚಾಲಕ ಶಂಕರ್ (35), ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕ ಸತೀಶ್ (40) ಮೃತ ದುರ್ದೈವಿಗಳು.
ಮೃತರು ಗಂಗಾವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇಬ್ಬರು ಕಮಿಷನ್ ಹಣ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಡೆಯುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದರು. ಕೋರ ಸಮೀಪ ಕ್ರೂಸರ್ ಹಿಂಬದಿಯ ಟೈಯರ್ ಬದಲಿಸುತ್ತಿದ್ದರು. ಇದೇ ಸಂದರ್ಭದಲ್ಲಿ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಕ್ರೂಸರ್ ಲಾರಿ ಡಿಕ್ಕಿ ಹೊಡೆದಿದೆ.
ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕೋರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೋರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ