Advertisment

ನಿಶ್ಚಿತಾರ್ಥ ಮುಗಿಸಿ ಬರುವಾಗ ಭೀಕರ ಅಪಘಾತ.. ಓರ್ವ ಸಾವು, 10 ಮಂದಿ ಗಂಭೀರ

author-image
Ganesh
Updated On
ನಿಶ್ಚಿತಾರ್ಥ ಮುಗಿಸಿ ಬರುವಾಗ ಭೀಕರ ಅಪಘಾತ.. ಓರ್ವ ಸಾವು, 10 ಮಂದಿ ಗಂಭೀರ
Advertisment
  • ವಿಜಯನಗರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ
  • ಲಾರಿ ಹಾಗೂ ಟಿಟಿ ವಾಹನ ಮಧ್ಯೆ ಅಪಘಾತ ನಡೆದಿದೆ
  • ಕಲಬುರಗಿಯಿಂದ ವಾಪಸ್ ಆಗ್ತಿದ್ದ ಸಂಬಂಧಿಕರು

ವಿಜಯನಗರ: ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ 10 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್​ನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

Advertisment

ಕೃಷ್ಣಪ್ಪ (62) ಮೃತ ದುರ್ದೈವಿ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟಿಟಿ ವಾಹನ ಡಿಕ್ಕಿಯಾಗಿ ಅನಾಹುತ ಸಂಭವಿಸಿದೆ. ಕಲುಬುರಗಿಯಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು ಚಿಕ್ಕಬಳ್ಳಾಪುರದ ಆರೋಡಿ ಗ್ರಾಮಕ್ಕೆ ತೆರಳುತ್ತಿದ್ದರು. ಟಿಟಿ ವಾಹನದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 16 ಮಂದಿ ಪ್ರಯಾಣಿಕರಿದ್ದರು.

ಇದನ್ನೂ ಓದಿ:ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ.. ಹೊನ್ನಾವರ-ಸಾಗರ-ಶಿವಮೊಗ್ಗ ಮಾರ್ಗ ಬಂದ್..!

publive-image

ಗಂಗಾವತಿಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಕೆಟ್ಟು ನಿಂತಿತ್ತು. ಡಿಕ್ಕಿ ರಭಸಕ್ಕೆ ಟಿಟಿ ವಾಹನ ನುಜ್ಜು-ಗುಜ್ಜಾಗಿದೆ, ಇಬ್ಬರು ಸಿಲುಕಿಕೊಂಡಿದ್ದರು. ಅವರನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisment

ಇದನ್ನೂ ಓದಿ:ಮೀನು ಹಿಡಿಯಲು ಹೋದಾಗ ಭೀಕರ ಅಪಘಾತ.. ಓರ್ವ ಯುವಕ ಸ್ಥಳದಲ್ಲೇ ಸಾವು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment