/newsfirstlive-kannada/media/post_attachments/wp-content/uploads/2025/04/puc-exam2.jpg)
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಲಾ, ವಾಣಿಜ್ಯ, ವಿಜ್ಞಾನ ಮೂರೂ ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ಇದನ್ನೂ ಓದಿ:Newsfirst ಜ್ಞಾನ ಸಂಗಮಕ್ಕೆ ಬಂದರೆ ವಿದ್ಯಾರ್ಥಿಗಳಿಗೆ ಏನು ಉಪಯೋಗ?
[caption id="attachment_118963" align="aligncenter" width="800"] ಎಲ್.ಆರ್. ಸಂಜನಾ ಬಾಯಿ[/caption]
ಕಲಾ ವಿಭಾಗ
ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಐಎನ್ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್. ಸಂಜನಾ ಬಾಯಿ ಟಾಪರ್ ಆಗಿದ್ದಾರೆ. 600ಕ್ಕೆ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮಾಡ್ತಿದ್ದ ಸಂಜನಾ ಬಾಯಿ ಲಾರಿ ಡ್ರೈವರ್ ಪುತ್ರಿಯಾಗಿದ್ದಾಳೆ. ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಸಂಜನಾ ಬಾಯಿ ವಾಸವಾಗಿದ್ದಾರೆ.
ವಾಣಿಜ್ಯ ವಿಭಾಗ
ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್ನ ಕೆನೆರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಾಶ್ರೀ ಎಸ್. 600ಕ್ಕೆ 599 ಅಂಕ ಗಳಿಸುವ ಮೂಲಕ ಟಾಪರ್ ಆಗಿದ್ದಾರೆ.
ವಿಜ್ಞಾನ ವಿಭಾಗ
ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೊಡಿಬೈಲ್ನ ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಎಸ್. 597 ಅಂಕ ಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದಾರೆ.
[caption id="attachment_118962" align="aligncenter" width="800"] ಕೆ. ನಿರ್ಮಲಾ[/caption]
ರಾಜ್ಯಕ್ಕೆ 2ನೇ ಸ್ಥಾನ ಪಡೆದ
ವಿಜಯನಗರ ಜಿಲ್ಲೆಯ ಇಟಗಿಯ ಪಂಚಮಸಾಲಿ ಪಿಯು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ನಿರ್ಮಲಾ ರಾಜ್ಯಕ್ಕೆ 2ನೇ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಕೆ. ನಿರ್ಮಲಾ 600ಕ್ಕೆ 596 ಅಂಕ ಪಡೆದುಕೊಂಡಿದ್ದಾರೆ.
[caption id="attachment_118961" align="alignnone" width="800"] ಪ್ರತೀಕ್ಷಾ ಪಿ[/caption]
ರಾಜ್ಯಕ್ಕೆ 3ನೇ ಪಡೆದ ವಿದ್ಯಾರ್ಥಿನಿ ಪ್ರತೀಕ್ಷಾ ಪಿ
ಬೆಂಗಳೂರಿನ ವಾಣಿಜ್ಯ ವಿಭಾಗದಲ್ಲಿ ವಿದ್ಯಾರ್ಥಿನಿ ಪ್ರತೀಕ್ಷಾ ಪಿ ರಾಜ್ಯಕ್ಕೆ 3ನೇ ಸ್ಥಾನ ಪಡೆದುಕೊಂಡಿದ್ದಾಳೆ. ಬೆಂಗಳೂರಿನ ಎಎಸ್ಸಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಆಗಿರೋ ಪ್ರತೀಕ್ಷಾ ಪಿ 600ಕ್ಕೆ 597 ಅಂಕ ಪಡೆದುಕೊಂಡಿದ್ದಾರೆ.
ಇನ್ನೂ, ರಾಜ್ಯದಲ್ಲಿ ಉಡುಪಿ ಜಿಲ್ಲೆ 93.90 ಫಲಿತಾಂಶದ ಮೂಲಕ ಪ್ರಥಮ ಸ್ಥಾನದಲ್ಲಿದ್ದು, ದಕ್ಷಿಣ ಕನ್ನಡ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳು ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದೆ. ರಾಜ್ಯದಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದು, ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇ.53.29, ವಾಣಿಜ್ಯ ವಿಭಾಗದಲ್ಲಿ ಶೇ.76.07, ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.82.54ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ