/newsfirstlive-kannada/media/post_attachments/wp-content/uploads/2025/04/pu-sanjana-bhai.jpg)
ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಕಲಾ, ವಾಣಿಜ್ಯ, ವಿಜ್ಞಾನ ಮೂರೂ ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿ ಮತ್ತೊಮ್ಮೆ ಹೆಣ್ಮಕ್ಳೆ ಸ್ಟ್ರಾಂಗು ಗುರು ಅಂತ ಪ್ರೂವ್ ಮಾಡಿದ್ದಾರೆ.
ಇದನ್ನೂ ಓದಿ:Newsfirst ಜ್ಞಾನ ಸಂಗಮಕ್ಕೆ ಬಂದರೆ ವಿದ್ಯಾರ್ಥಿಗಳಿಗೆ ಏನು ಉಪಯೋಗ?
ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಐಎನ್ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್. ಸಂಜನಾ ಬಾಯಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್ ರ್ಯಾಂಕ್ ಬಂದಿದ್ದಾರೆ. 600ಕ್ಕೆ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮಾಡ್ತಿದ್ದ ಸಂಜನಾ ಬಾಯಿ ಲಾರಿ ಡ್ರೈವರ್ ಪುತ್ರಿಯಾಗಿದ್ದಾಳೆ. ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಸಂಜನಾ ಬಾಯಿ ವಾಸವಾಗಿದ್ದಾರೆ.
ಸದ್ಯ ವಿದ್ಯಾರ್ಥಿನಿ ಸಂಜನಾಬಾಯಿ ಸಖತ್ ಖುಷಿಯಲ್ಲಿದ್ದಾರೆ. ಸಂಜನಾಬಾಯಿ ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆದುಕೊಂಡಿದ್ದಕ್ಕಾಗಿ ಕಾಲೇಜು ಮಂಡಳಿ ಅವರಿಗೆ ಸಿಹಿ ತಿನಿಸಿ ಸಂಭ್ರಮಿಸುತ್ತಿದ್ದಾರೆ. ಇನ್ನೂ, ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಸಂಜನಾಗೆ ಐಎಎಸ್ ಆಗುವ ಆಸೆ ಇದೆಯಂತೆ. ಸಂಜನಾಬಾಯಿ ತಂದೆ ರಾಮಾನಾಯ್ಕ್ ಲಾರಿ ಚಾಲಕರಾಗಿದ್ದಾರೆ. ಲಾರಿ ಚಾಲನೆ ಮಾಡುತ್ತಲೇ ಮಗಳ ಶಿಕ್ಷಣಕ್ಕೆ ತಂದೆ ಆದ್ಯತೆ ಕೊಟ್ಟಿದ್ದಾರೆ. ಮಗಳ ಸಾಧನೆ ಬಗ್ಗೆ ಮಾಧ್ಯಮದಲ್ಲಿ ನೋಡಿದ್ದ ತಂದೆ ತಾಯಿ ಖುಷಿಪಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ