newsfirstkannada.com

ಹಿಟ್​ ಅಂಡ್ ರನ್​ಗೆ ಮಾವ-ಅಳಿಯ ಬಲಿ, ಗಂಭೀರವಾಗಿ ಗಾಯಗೊಂಡ ಓರ್ವ ಮಹಿಳೆ

Share :

Published March 30, 2024 at 10:56am

    ಬೈಪಾಸ್ ಬಳಿ ಪಂಕ್ಚರ್ ಆಗಿದ್ದ ಕಾರಿನ ಟೈಯರ್ ಚೇಂಜ್ ಮಾಡುತ್ತಿದ್ದರು

    ಬೆಂಗಳೂರಿನಿಂದ ಪತ್ನಿ, ಮಾವನ ಜೊತೆ ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ

    ರಸ್ತೆಯಲ್ಲಿ ಕಾರು ನಿಲ್ಲಿಸಿಕೊಂಡು ಟೈಯರ್ ಚೇಂಜ್ ಮಾಡುತ್ತಿದ್ದ ಚಾಲಕ

ಹಾಸನ: ಚನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬೈಪಾನ್‌ನಲ್ಲಿ ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಸಾವನ್ನಪ್ಪಿದ್ದು ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅರಸೀಕೆರೆ ತಾಲೂಕಿನ ನಾಗೇನಹಳ್ಳಿ ಗ್ರಾಮದ ಮಧು (35), ಬೇಲೂರು ತಾಲೂಕಿನ ದೇವಿಹಳ್ಳಿ ಗ್ರಾಮದ ಜವರಯ್ಯ (65) ಮೃತಪಟ್ಟವರು. ಮಧು ಪತ್ನಿ ಗೀತಾ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ತನ್ನ ಪತ್ನಿ ಹಾಗೂ ಮಾವನನ್ನ ಕಾರಿನಲ್ಲಿ ಕೂರಿಸಿಕೊಂಡು ಹಾಸನದ ಕಡೆಗೆ ಮಧು ಹೊರಟಿದ್ದರು. ಈ ವೇಳೆ ಶೆಟ್ಟಿಹಳ್ಳಿ ಬೈಪಾಸ್ ಬಳಿ ಬರುತ್ತಿದ್ದಂತೆ ಕಾರಿನ ಟೈಯರ್ ಪಂಕ್ಚರ್ ಆಗಿದೆ. ಹೀಗಾಗಿ ರಸ್ತೆಯಲ್ಲೇ ಕಾರು ನಿಲ್ಲಿಸಿಕೊಂಡು ಟೈಯರ್ ಬದಲಾವಣೆ ಮಾಡುತ್ತಿದ್ದರು.

ಈ ವೇಳೆ ವೇಗವಾಗಿ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ಹಾಗೇ ಹೋಗಿದೆ. ಪರಿಣಾಮ ಸ್ಥಳದಲ್ಲೇ ಮಧು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಜವರಾಯ್ಯರನ್ನ ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯಯೇ ಸಾವನ್ನಪ್ಪಿದ್ದಾರೆ. ಮಧು ಪತ್ನಿಗೆ ಚನ್ನರಾಯಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಿಟ್ ಅಂಡ್ ರನ್ ಮಾಡಿರುವ ಚಾಲಕ ಲಾರಿ ನಿಲ್ಲಿಸದೇ ಹಾಗೇ ಹೋಗಿದ್ದಾನೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಿಟ್​ ಅಂಡ್ ರನ್​ಗೆ ಮಾವ-ಅಳಿಯ ಬಲಿ, ಗಂಭೀರವಾಗಿ ಗಾಯಗೊಂಡ ಓರ್ವ ಮಹಿಳೆ

https://newsfirstlive.com/wp-content/uploads/2024/03/HSN_CAR.jpg

Load More