/newsfirstlive-kannada/media/post_attachments/wp-content/uploads/2024/06/Hanumesh.jpg)
ರಾಯಚೂರು: ಯುವತಿ ಪ್ರೀತಿ ನಿರಾಕರಿಸಿದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ತಾಲ್ಲೂಕಿನ ಮಲಿಯಾಬಾದ್ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ರಾಯಚೂರು ತಾಲ್ಲೂಕಿನ ಗಧಾರ್ ಗ್ರಾಮದ ಹನುಮೇಶ್( 21) ಎಂದು ಗುರುತಿಸಲಾಗಿದೆ.
ಯುವಕ ಹನುಮೇಶ್ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ನಗರದ ನವಯುಗ ಕಾಲೇಜಿನ ವಿದ್ಯಾರ್ಥಿಯಾಗಿದ್ದನು. ಮದುವೆಗೆ ಯುವತಿ ಮನೆಯವರು ನಿರಾಕರಿಸಿದಕ್ಕೆ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇದನ್ನೂ ಓದಿ: ದರ್ಶನ್​​ ಒಳಿತಿಗಾಗಿ ಶನಿಪೂಜೆ ಮಾಡಿಸಿದ ಬಾವ ಮಂಜುನಾಥ್!
ಮಾಹಿತಿ ತಿಳಿದು ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನಲ್ಲಿ ಬಿದ್ದ ಯುವಕನ ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
/newsfirstlive-kannada/media/post_attachments/wp-content/uploads/2024/06/Bike-1.jpg)
ಇದನ್ನೂ ಓದಿ: ಬೆಳ್ಳಂಬೆಳಗ್ಗೆ.. ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್ ವೇನಲ್ಲಿ ಸರಣಿ ಅಪಘಾತ
ಹನುಮೇಶ್ ಸಾವನ್ನಪ್ಪಿರುವ ಸುದ್ದಿ ತಿಳಿದು ಕುಟುಂಬಸ್ಥರು ಆಸ್ಪತ್ರೆ ಬಳಿ ಓಡೋಡಿ ಬಂದಿದ್ದಾರೆ. ಆಸ್ಪತ್ರೆಯ ಬಳಿ ಆತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us