/newsfirstlive-kannada/media/post_attachments/wp-content/uploads/2024/06/BNG-DEATH.jpg)
- ಬೆಂಗಳೂರು ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ಘಟನೆ
- ಕಳೆದ ಕೆಲ ವರ್ಷಗಳ ಹಿಂದೆ ಒಬ್ಬರಿಗೊಬ್ಬರ ಪರಿಚಯವಾಗಿತ್ತು
- ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ಪರಿಶೀಲನೆ
ಬೆಂಗಳೂರು: ಲಿವಿಂಗ್ ಟುಗೆದರ್​​​ನಲ್ಲಿದ್ದ ಜೋಡಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದು, ಹಲವು ಅನುಮಾನಗಳು ಮೂಡಿವೆ.
ಪ್ರಭು(38), ಲಕ್ಕಮ್ಮ(30) ಮೃತ ದುರ್ದೈವಿಗಳು. ಪ್ರಭು ಡ್ರೈವರ್ ಕೆಲಸ ಮಾಡುತ್ತಿದ್ದ. ಲಕ್ಕಮ್ಮ ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದರು. ಕಳೆದ ಕೆಲ ವರ್ಷಗಳ ಹಿಂದೆ ಒಬ್ಬರಿಗೊಬ್ಬರ ಪರಿಚಯವಾಗಿತ್ತು. ಇಬ್ಬರು ಒಂದೇ ಮನೆಯಲ್ಲಿ ಲಿವಿಂಗ್ ರಿಲೇಷನ್​ಶಿಪ್​ನಲ್ಲಿ ವಾಸವಿದ್ದರು.
ಕಳೆದ ಮೂರು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಾಸವಿದ್ದ ಮನೆಯಲ್ಲಿ ಕೆಟ್ಟ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ್ದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಶವ ಪತ್ತೆಯಾಗಿದೆ. ಈ ಜೋಡಿ ವಿಶ್ವನಾಥ್ ಎಂಬುವರ ಮನೆಯಲ್ಲಿ ಬಾಡಿಗೆ ಪಡೆದಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ