ನಮ್ಮ ಮೆಟ್ರೋದಲ್ಲೂ ಪ್ರೇಮಿಗಳ ಹುಚ್ಚಾಟ.. 1 ನಿಮಿಷ 30 ಸೆಕೆಂಡ್​ನ ರೊಮ್ಯಾನ್ಸ್ ವಿಡಿಯೋ ವೈರಲ್..!

author-image
Veena Gangani
Updated On
ನಮ್ಮ ಮೆಟ್ರೋದಲ್ಲೂ ಪ್ರೇಮಿಗಳ ಹುಚ್ಚಾಟ.. 1 ನಿಮಿಷ 30 ಸೆಕೆಂಡ್​ನ ರೊಮ್ಯಾನ್ಸ್ ವಿಡಿಯೋ ವೈರಲ್..!
Advertisment
  • ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಜೋಡಿ ರೊಮ್ಯಾನ್ಸ್
  • ಅಕ್ಕ-ಪಕ್ಕ ಪ್ರಯಾಣಿಕರಿದ್ದರೂ ಕ್ಯಾರೆ ಎನ್ನದ ಪ್ರೇಮಿಗಳು
  • ಸೋಷಿಯಲ್​ ಮೀಡಿಯಾದಲ್ಲಿ ವಿಡಿಯೋ ವೈರಲ್

ಬೆಂಗಳೂರು: ಅಕ್ಕ-ಪಕ್ಕ ಸಹ ಪ್ರಯಾಣಿಕರಿದ್ದರೂ ಕ್ಯಾರೇ ಎನ್ನದೇ ಪ್ರೇಮಿಗಳಿಬ್ಬರು ನಮ್ಮ ಮೆಟ್ರೋ ನಿಲ್ದಾಣದಲ್ಲಿ ಅಸಭ್ಯವಾಗಿ ವರ್ತಿಸಿರೋ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.

ಇದನ್ನೂ ಓದಿ: 9 ಸಾವಿರಕ್ಕೂ ಹೆಚ್ಚು ಸಹಾಯಕ ಲೋಕೋ ಪೈಲಟ್ ಹುದ್ದೆಗಳು.. SSLC ಪಾಸ್ ಆಗಿದ್ರೆ ಸಾಕು…!

publive-image

ಈ ಹಿಂದೆ ದೆಹಲಿ ಸೇರಿದಂತೆ ಕೆಲವು ಕಡೆಗಳಲ್ಲಿ ಕೆಲ ಪ್ರೇಮಿಗಳು ಮೆಟ್ರೋದಲ್ಲಿ ಕುಚೇಷ್ಟೆ ಮಾಡಿ ಸಹ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡೋ ವಿಡಿಯೋಗಳು ವೈರಲ್​ ಆಗುತ್ತಲೇ ಇರುತ್ತವೆ. ಇದೀಗ ಬೆಂಗಳೂರಿನಲ್ಲಿ ಈ ರೀತಿ ಘಟನೆ ನಡೆದಿದ್ದು ನಾಚಿಕೆಗೇಡಿನ ಸಂಗತಿಯಾಗಿದೆ. ಹೌದು, ಇಬ್ಬರು ರೊಮ್ಯಾನ್ಸ್ ಮಾಡುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದನ್ನೂ ನೆಟ್ಟಿಗರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಬೆಂಗಳೂರಿನ ಮಾದಾವರ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

publive-image

ಪ್ರೇಮಿಗಳ ಸುತ್ತ ಮುತ್ತ ಪ್ರಯಾಣಿಕರು ಓಡಾಡುತ್ತಿದ್ದರೂ ಅಸಭ್ಯವಾಗಿ ವರ್ತಿಸಿದ್ದಾರೆ. ಸುಮಾರು 1 ನಿಮಿಷ 30 ಸೆಕಂಡ್​ನ ವಿಡಿಯೋ ಈಗ ವೈರಲ್ ಆಗುತ್ತಿದೆ. ಇನ್ನೂ, ಕರ್ನಾಟಕ ಪೋರ್ಟ್​​ಫೋಲಿಯೋ ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಅದರ ಜೊತೆಗೆ ಬೆಂಗಳೂರು ಮೆಟ್ರೋ ಕೂಡ ದೆಹಲಿ ಮೆಟ್ರೋ ಸಂಸ್ಕೃತಿಯತ್ತ ಸಾಗುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ. ಇದೇ ವಿಡಿಯೋದಲ್ಲಿರೋ ಜೋಡಿಯ ವರ್ತನೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬಗ್ಗೆ ಬಿಎಂಆರ್​ಸಿಎಲ್ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment